ಜೈಪುರ: ರಾಜಸ್ಥಾನದ ಜೈಸಲ್ಮೇರ್ನಲ್ಲಿರುವ ಸರ್ಕಾರಿ ಭೂಮಿಯಲ್ಲಿ ವಾಸವಿದ್ದ ಪಾಕಿಸ್ತಾನಿ ಹಿಂದೂ ವಲಸಿಗರ ಮನೆಗಳನ್ನು ನೆಲಸಮಗೊಳಿಸಲು ಆದೇಶ ಹೊರಡಿಸಿದ್ದಕ್ಕಾಗಿ ಐಎಎಸ್ ಅಧಿಕಾರಿ ಟೀನಾ ದಾಬಿ ಭಾರೀ ಆಕ್ರೋಶ ಎದುರಿಸುತ್ತಿದ್ದಾರೆ.
ಪ್ರಸ್ತುತ ಜೈಸಲ್ಮೇರ್ ಜಿಲ್ಲಾಧಿಕಾರಿಯಾಗಿರುವ ದಾಬಿ ಅವರ ಆದೇಶದ ಮೇರೆಗೆ ಜೈಸಲ್ಮೇರ್ ಜಿಲ್ಲಾ ಕೇಂದ್ರದಿಂದ ಸುಮಾರು 4 ಕಿಮೀ ದೂರದಲ್ಲಿರುವ ಅಮರ್ ಸಾಗರ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಪಾಕಿಸ್ತಾನಿ ಹಿಂದೂ ವಲಸಿಗರ ಮನೆಗಳನ್ನು ಕೆಡವಲಾಗಿದೆ. 150 ಕ್ಕೂ ಹೆಚ್ಚು ಮಹಿಳೆಯರು, ಪುರುಷರು ಮತ್ತು ಮಕ್ಕಳು ವಾಸಿಸುತ್ತಿದ್ದ 50 ಕ್ಕೂ ಹೆಚ್ಚು ‘ಕಚ್ಚ’ ಮನೆಗಳನ್ನು ಬುಲ್ಡೋಜರ್ಗಳನ್ನು ಬಳಸಿ ನೆಲಸಮ ಮಾಡಲಾಗಿದೆ ಎಂದು ವರದಿಯಾಗಿದೆ, ಇದನ್ನು ವಿರೋಧಿಸಿ ಪಾಕಿಸ್ತಾನಿ ಹಿಂದೂ ವಲಸಿಗರು ಟೀನಾ ದಾಬಿ ಅವರ ಕಚೇರಿಯ ಹೊರಗೆ ಟೆಂಟ್ಗಳನ್ನು ಹಾಕುವ ಮೂಲಕ ಪ್ರತಿಭಟನೆ ನಡೆಸಿದ್ದಾರೆ.
ಆಡಳಿತದ ಪ್ರಕಾರ, ನಿರಾಶ್ರಿತರು ಅಮರ್ ಸಾಗರ್ ಕೊಳದ ದಡದಲ್ಲಿ ಅಕ್ರಮ ಮನೆಗಳನ್ನು ನಿರ್ಮಿಸಿಕೊಂಡು ವಾಸಿಸುತ್ತಿದ್ದಾರೆ, ಇದರಿಂದಾಗಿ ಕೆರೆಗೆ ನೀರು ಬರುವುದು ಸ್ಥಗಿತಗೊಂಡಿದೆ.
ಶೆಲ್ಟರ್ಗಳಲ್ಲಿ ನಿರಾಶ್ರಿತರಿಗೆ ವಾಸ್ತವ್ಯ ಮತ್ತು ಆಹಾರದ ವ್ಯವಸ್ಥೆ ಮಾಡಲಾಗಿದೆ. ಆದರೆ, ಭಾರತೀಯ ಪೌರತ್ವ ಪಡೆಯದ ಪಾಕಿಸ್ತಾನಿ ನಿರಾಶ್ರಿತರಿಗೆ ಪುನರ್ವಸತಿ ಕಲ್ಪಿಸುವ ಬಗ್ಗೆ ರಾಜ್ಯ ಸರ್ಕಾರದಿಂದ ಇದುವರೆಗೆ ಯಾವುದೇ ಸೂಚನೆ ಬಂದಿಲ್ಲ. ಸದ್ಯಕ್ಕೆ ತಾತ್ಕಾಲಿಕ ರಾತ್ರಿ ಶೆಲ್ಟರ್ಗಳಲ್ಲಿ ಅವರಿಗೆ ವ್ಯವಸ್ಥೆ ಮಾಡಲಾಗಿದೆ” ಎಂದು ಟೀನಾ ದಾಬಿ ಹೇಳಿರುವುದಾಗಿ ವರದಿಗಳು ತಿಳಿಸಿವೆ.
ಈ ನಡುವೆ, ರಾಜಸ್ಥಾನ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ನಾಯಕ ರಾಜೇಂದ್ರ ರಾಥೋಡ್ ಅವರು ಪಾಕಿಸ್ತಾನಿ ಹಿಂದೂ ವಲಸಿಗರ ಮನೆಗಳನ್ನು ಧ್ವಂಸಗೊಳಿಸಿರುವುದಕ್ಕೆ ಅಶೋಕ್ ಗೆಹ್ಲೋಟ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ‘ತುಷ್ಟೀಕರಣ ರಾಜಕೀಯ’ ಕಾರಣ ಎಂದು ಟೀಕಿಸಿದ್ದಾರೆ. ಪಾಕಿಸ್ತಾನದಿಂದ ಬಂದ ಹಿಂದೂ ನಿರಾಶ್ರಿತರ ಮನೆಗಳನ್ನು ಬುಲ್ಡೋಜರ್ಗಳ ಮೂಲಕ ಕೆಳಗಿಳಿಸಿರುವುದು ಕಾಂಗ್ರೆಸ್ ಸರ್ಕಾರದ ಕ್ರೂರ ಧೋರಣೆಯನ್ನು ತೋರಿಸುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.