ನವದೆಹಲಿ: ‘ದಿ ಕೇರಳ ಸ್ಟೋರಿ’ ಚಿತ್ರದ ಪ್ರದರ್ಶನವನ್ನು ನಿಷೇಧಿಸಿ ಪಶ್ಚಿಮ ಬಂಗಾಳ ಸರ್ಕಾರ ಮೇ 8ರಂದು ನೀಡಿದ್ದ ಆದೇಶವನ್ನು ಸುಪ್ರೀಂ ಕೋರ್ಟ್ ಇಂದು ರದ್ದುಗೊಳಿಸಿದೆ.
ನಿಷೇಧಕ್ಕೆ ಸರ್ಕಾರ ನೀಡಿದ ಕಾರಣಗಳು ಸೂಕ್ತವಾಗಿಲ್ಲ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
“ದೇಶದ ಎಲ್ಲಾ ಕಡೆಯೂ ಸಿನಿಮಾ ಪ್ರದರ್ಶನ ಕಾಣುತ್ತಿದೆ. ಸಂಪೂರ್ಣ ರಾಜ್ಯದಲ್ಲಿ ನೀವು ನಿಷೇಧ ಹೇರಲು ಸಾಧ್ಯವಿಲ್ಲ. ಸಾರ್ವಜನಿಕ ಪ್ರದರ್ಶನದ ಮೂಲಭೂತ ಹಕ್ಕಿಗೆ ಧಕ್ಕೆ ತರುವಂತಿಲ್ಲ” ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಟಿ.ಎಸ್.ನರಸಿಂಹ ಹಾಗೂ ಜೆ.ಬಿ ಪರದಇವಆಲಆ ಅವರನ್ನು ಒಳಗೊಂಡ ಪೀಠವು ಹೇಳಿದೆ.
ಇದೇ ವೇಳೆ ಚಿತ್ರದ ಪ್ರದರ್ಶನವನ್ನು ನಿಲ್ಲಿಸಲು ಯಾವುದೇ ಕ್ರಮಗಳನ್ನು ತೆಗೆದುಕೊಳ್ಳಬಾರದು ಮತ್ತು ಚಲನಚಿತ್ರ ಪ್ರೇಕ್ಷಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರತಿ ಚಿತ್ರಮಂದಿರಗಳಲ್ಲಿ ಸೂಕ್ತ ಭದ್ರತೆ ಒದಸುವಂತೆ ನ್ಯಾಯಾಲಯ ತಮಿಳುನಾಡು ಸರ್ಕಾರಕ್ಕೂ ನಿರ್ದೇಶಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.