ನವದೆಹಲಿ: ಸುಪ್ರೀಂಕೋರ್ಟ್ ಇಂದು ಎರಡು ಹೊಸ ನ್ಯಾಯಾಧೀಶರನ್ನು ಪಡೆದುಕೊಂಡಿದೆ. ಆಂಧ್ರಪ್ರದೇಶ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಹಿರಿಯ ವಕೀಲ ಕಲ್ಪತಿ ವೆಂಕಟರಮಣ ವಿಶ್ವನಾಥನ್ ಅವರು ಸುಪ್ರೀಂಕೋರ್ಟ್ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚದ್ರಚೂಡ್ ಅವರು ಪ್ರಮಾಣ ವಚನ ಬೋಧಿಸಿದ್ದಾರೆ.
ನ್ಯಾಯಮೂರ್ತಿ ಮಿಶ್ರಾ ಮತ್ತು ವಿಶ್ವನಾಥನ್ ಅವರನ್ನು ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಾಗಿ ನೇಮಕ ಮಾಡುವ ವಾರಂಟ್ ಅನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಚೇರಿಯಿಂದ ಗುರುವಾರ ಹೊರಡಿಸಲಾಗಿದೆ ಮತ್ತು ನೇಮಕಾತಿಗಳನ್ನು ಹೊಸ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಟ್ವಿಟರ್ನಲ್ಲಿ ಪ್ರಕಟಿಸಿದ್ದಾರೆ.
ಜಸ್ಟಿಸ್ ವಿಶ್ವನಾಥನ್ ಅವರು ಆಗಸ್ಟ್ 11, 2030 ರಂದು ನ್ಯಾಯಮೂರ್ತಿ ಜೆಬಿ ಪರ್ದಿವಾಲಾ ಅವರ ನಿವೃತ್ತಿಯ ನಂತರ ಭಾರತದ ಮುಖ್ಯ ನ್ಯಾಯಮೂರ್ತಿಯಾಗುತ್ತಾರೆ ಮತ್ತು ಮೇ 25, 2031 ರವರೆಗೆ ಹುದ್ದೆಯಲ್ಲಿ ಇರುತ್ತಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಸುಪ್ರೀಂ ಕೋರ್ಟ್ನ ವೆಬ್ಸೈಟ್ನಲ್ಲಿ ನೇರಪ್ರಸಾರ ಮಾಡಲಾಯಿತು.
ಮೇ 16 ರಂದು ಸುಪ್ರೀಂ ಕೋರ್ಟ್ ಕೊಲಿಜಿಯಂ ಅವರ ನೇಮಕಕ್ಕೆ ಶಿಫಾರಸು ಮಾಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.