ನವದೆಹಲಿ: ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವ್ಯವಸ್ಥೆಗೆ ಸೇರಲು ಜಪಾನ್ ತೀವ್ರ ಆಸಕ್ತಿಯನ್ನು ವ್ಯಕ್ತಪಡಿಸಿದೆ. ಮಾಧ್ಯಮಗಳಿಗೆ ನೀಡಿದ ಸಂದರ್ಶನದಲ್ಲಿ ಜಪಾನಿನ ಡಿಜಿಟಲ್ ಸಚಿವ ಕೊನೊ ತಾರೊ ಅವರು ಉಭಯ ದೇಶಗಳ ನಡುವೆ ನಡೆಯುತ್ತಿರುವ ಡಿಜಿಟಲ್ ಸಹಕಾರದ ಬಗ್ಗೆ ಮಹತ್ವದ ಮಾಹಿತಿಯನ್ನು ನೀಡಿದರು.
ಭಾರತದ ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್ (UPI) ವ್ಯವಸ್ಥೆಗೆ ಸೇರಲು ಜಪಾನ್ ಮುಂದಾಗಿರುವುದನ್ನು ತಿಳಿಸಿದ ಅವರು, ಈ ಕ್ರಮವು ಇ-ಐಡಿಗಳ ಪರಸ್ಪರ ಕಾರ್ಯಸಾಧ್ಯತೆ ಮತ್ತು ಪರಸ್ಪರ ಗುರುತಿಸುವಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ಅವರು ಹೇಳಿದರು.
ಟ್ಯಾರೋ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವ ಅಶ್ವಿನಿ ವೈಷ್ಣವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಡಿಜಿಟಲ್ ಇಂಡಿಯಾ ದೃಷ್ಟಿಕೋನವನ್ನು ಗುರುತಿಸಿದ್ದಕ್ಕಾಗಿ ಕೃತಜ್ಞತೆ ವ್ಯಕ್ತಪಡಿಸಿದರು. ಅಲ್ಲದೇ ಈ ದೃಷ್ಟಿಕೋನವು ಜಾಗತಿಕವಾಗಿ ಮಹತ್ವವನ್ನು ಪಡೆದುಕೊಂಡಿದೆ ಎಂದಿದ್ದಾರೆ.
ಡಿಜಿಟಲ್ ಇಂಡಿಯಾ ದೃಷ್ಟಿಕೋನ ಡಿಜಿಟಲ್ ತಂತ್ರಜ್ಞಾನವನ್ನು ಹೇಗೆ ಪ್ರಜಾಪ್ರಭುತ್ವಗೊಳಿಸಿದೆ ಎಂಬುದನ್ನು ಜನರು ಅರ್ಥಮಾಡಿಕೊಂಡಿದ್ದಾರೆ ಎಂದು ವೈಷ್ಣವ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.