ಬೆಂಗಳೂರು: ಖ್ಯಾತ ನೇತ್ರ ತಜ್ಞ ಮತ್ತು ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ಅವರು ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಆಸ್ಪತ್ರೆಗೆ ತೆರಳಿ ಚಿಕಿತ್ಸೆ ನೀಡಿ ಮನೆಗೆ ವಾಪಸ್ಸಾಗಿದ್ದ ವೇಳೆ ಭುಜಂಗ ಶೆಟ್ಟಿ ಅವರಿಗೆ ಹೃದಯಾಘಾತ ಉಂಟಾಗಿತ್ತು. ಯಶವಂತಪುರದ ಆಸ್ಪತ್ರೆಗೆ ದಾಖಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ವರದಿಗಳು ತಿಳಿಸಿವೆ.
ಭುಜಂಗ ಶೆಟ್ಟಿ ಅವರು 1978 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಮಾಡಿದ್ದರು. 1982 ರಲ್ಲಿ ಬೆಂಗಳೂರು ವೈದ್ಯಕೀಯ ಕಾಲೇಜಿನ ಮಿಂಟೋ ಆಪ್ತಾಲ್ಮಿಕ್ ಆಸ್ಪತ್ರೆಯಲ್ಲಿ ನೇತ್ರಶಾಸ್ತ್ರದಲ್ಲಿ ರೆಸಿಡೆನ್ಸಿ ತರಬೇತಿ ಪಡೆದಿದ್ದರು. 80ರ ದಶಕದಲ್ಲಿ ಸಣ್ಣ ಕ್ಲಿನಿಕ್ನಲ್ಲಿ ನೇತ್ರ ಚಿಕಿಯ್ಸಾಲಯವನ್ನು ಪ್ರಾರಂಭಿಸಿ ನಂತರ ನಾರಾಯಣ ನೇತ್ರಾಲಯದ ಅಧ್ಯಕ್ಷರಾದರು.
ಕಣ್ಣಿನ ಪೊರೆ ಮತ್ತು ಫಾಕೋಎಮಲ್ಸಿಫಿಕೇಶನ್ ಶಸ್ತ್ರಚಿಕಿತ್ಸೆಯಲ್ಲಿ ನೈಪುಣ್ಯತೆ ಹೊಂದಿದ್ದ ಅವರು ದೊಡ್ಡ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದರು. ಸದಾ ಕಣ್ಣಿನ ರೋಗಿಗಳ ಸೇವೆಯಲ್ಲಿ ನಿರತರಾಗಿದ್ದ ಅವರು ತಮ್ಮ ಎರಡೂ ಕಣ್ಣುಗಳನ್ನು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.