ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾ ವಿಧಿ ಬೋಧಿಸಿದ್ದಾರೆ.
ಸಿದ್ದರಾಮಯ್ಯ ಮತ್ತು ಡಿಕೆಶಿ ಅವರ ಜೊತೆ ಇಂದು 8 ಮಂದಿ ಶಾಸಕರು ಕೂಡ ಪ್ರಮಾಣವಚನ ಸ್ವೀಕರಿಸಿದ್ದಾರೆ. ಜಮೀರ್ ಅಹ್ಮದ್ ಖಾನ್, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ, ಸತೀಶ್ ಜಾರಕಿಹೊಳಿ, ಎಂ.ಬಿ ಪಾಟೀಲ್, ಕೆ.ಜೆ ಜಾರ್ಜ್, ಕೆ.ಎಚ್ ಮುನಿಯಪ್ಪ, ಡಾ.ಜಿ ಪರಮೇಶ್ವರ್ ಸಂಪುಟ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಮುಖ್ಯಮಂತ್ರಿ ಕಛೇರಿಯ ನಾಮಫಲಕವನ್ನು ಬದಲಾಯಿಸಿ ಸಿದ್ದರಾಮಯ್ಯ ಹೆಸರನ್ನು ಅಳಪಡಿಸಲಾಯಿತು.
Bengaluru | Dr G Parameshwara, KH Muniyappa, KJ George and MB Patil take oath as cabinet ministers in the newly-elected Karnataka Government. pic.twitter.com/vGHhl0louL
— ANI (@ANI) May 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.