ದಂತೇವಾಡ: ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಕಳೆದ ತಿಂಗಳು ನಡೆದ ಅರನ್ಪುರ ಸ್ಫೋಟದಲ್ಲಿ 10 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಪ್ರಾಣ ಕಳೆದುಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿದಂತೆ ಎಂಟು ನಕ್ಸಲರು ಸಿಕ್ಕಿಬಿದ್ದಿದ್ದಾರೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಈ ಬೆಳವಣಿಗೆಯೊಂದಿಗೆ ಪ್ರಕರಣದಲ್ಲಿ ಬಂಧಿತರಾಗಿರುವ ನಕ್ಸಲರ ಸಂಖ್ಯೆ 17ಕ್ಕೆ ಏರಿಕೆಯಾಗಿದೆ ಎಂದು ಅವರು ಹೇಳಿದ್ದಾರೆ.
ಈ ಎಂಟು ನಕ್ಸಲರ ಪೈಕಿ ಐವರನ್ನು ಬುಧವಾರ (ಮೇ 17) ಬಂಧಿಸಲಾಗಿದ್ದು, ಅಪ್ರಾಪ್ತ ಬಾಲಕ ಸೇರಿದಂತೆ ಇತರ ಮೂವರನ್ನು ಶುಕ್ರವಾರ ಅರನ್ಪುರ್ ಪೊಲೀಸ್ ಠಾಣೆ ಪ್ರದೇಶ ಮತ್ತು ಪಕ್ಕದ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶುಕ್ರವಾರ ಸಂಜೆ ಪೊಲೀಸರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಮಾಸಾ ಕವಾಸಿ, ಕೋಸ ಮಾಂಡವಿ, ಅರ್ಜುನ್ ಕುಂಜಮ್, ದೇವಾ ಮದ್ವಿ ಮತ್ತು ಗಂಗಾ ಮದ್ವಿ ಬಂಧಿತರು, ಇವರನ್ನು ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ಮೂರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.