ಬೆಂಗಳೂರು: ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಡಿಸಿಎಂ ಆಗಿ ಡಿಕೆ ಶಿವಕುಮಾರ್ ಇಂದು ಅದ್ಧೂರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಬಳಿಕ ವಿಧಾನಸೌಧಕ್ಕೆ ಆಗಮಿಸಿಮೊದಲ ಸಚಿವ ಸಂಪುಟ ಸಭೆ ನಡೆಸುತ್ತಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಹೇಳಿದ್ದ ಐದು ಗ್ಯಾರಂಟಿಗಳ ಬಗ್ಗೆ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.
ವರದಿಗಳ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸಚಿವ ಸಂಪುಟ ಸಭೆಯಲ್ಲಿ ನೂತನ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಡಾ ಜಿ ಪರಮೇಶ್ವರ್, ಕೆಜೆ ಜಾರ್ಜ್, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಜಮೀರ್ ಅಹಮ್ಮದ್, ಎಂಬಿ ಪಾಟೀಲ್, ಕೆಎಚ್ ಮುನಿಯಪ್ಪ ಹಾಗೂ ಪ್ರಿಯಾಂಕ್ ಖರ್ಗೆ ಭಾಗವಹಿಸಿದ್ದಾರೆ.
ಸಂಪುಟ ಸಭೆಯ ಬಗ್ಗೆ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಜನರಿಗೆ ನೀಡಿರುವ ಭರವಸೆಗಳನ್ನು ಈಡೇರಿಸುವ ಸಲುವಾಗಿ ಸಚಿವ ಸಂಪುಟ ಸಭೆ ಕರೆಯಲಾಗಿದೆ ಎಂದಿದ್ದಾರೆ.
ಅಧಿಕಾರಕ್ಕೆ ಬಂದ ಒಂದು ಗಂಟೆಯೊಳಗೆ ನಾವು ಘೋಷಿಸಿದ ನಾಲ್ಕು ಗ್ಯಾರಂಟಿಗಳನ್ನು ಜಾರಿ ಮಾಡುತ್ತೇವೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಹೇಳಿದ್ದರು. ಅಲ್ಲದೇ ವಿವಿಧ ನಾಯಕರು ಕೂಡ ಗ್ಯಾರಂಟಿಗಳನ್ನು ನೀಡುವುದಾಗಿ ರಾಜ್ಯದ ಜನತೆಗೆ ಆಶ್ವಾಸನೆಗಳನ್ನು ನೀಡಿದ್ದರು. ಹೀಗಾಗಿ ಸಹಜವಾಗಿಯೇ ಎಲ್ಲರೂ ಗ್ಯಾರಂಟಿಗಳ ಬಗ್ಗೆ ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.