ಬೆಂಗಳೂರು: ಕರ್ನಾಟಕದ 16ನೇ ವಿಧಾನಸಭೆಯ ಮೊದಲ ಅಧಿವೇಶನದ ಇಂದಿನಿಂದ ಆರಂಭಗೊಂಡಿದ್ದು, ಮೂರು ದಿನಗಳ ಕಾಲ ಮುಂದುವರೆಯಲಿದೆ. ಮೊದಲ ದಿನದ ಕಲಾಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದ ಶಾಸಕರಾಗಿ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕನಕಪುರ ಕ್ಷೇತ್ರದ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಅಧಿವೇಶನದ ಮೊದಲ ಎರಡು ದಿನಗಳ ಕಾಲ ಎಲ್ಲ ಶಾಸಕರ ಪ್ರಮಾಣವಚನ ಸ್ವೀಕಾರ ನಡೆಯಲಿದೆ. ಮೂರನೇ ದಿನ ಸಭಾಧ್ಯಕ್ಷರ ಆಯ್ಕೆ ನಡೆಯಲಿದೆ. ಶಾಸಕರಿಗೆ ಪ್ರಮಾಣವಚನ ಬೋಧಿಸುವ ಜವಾಬ್ದಾರಿಯನ್ನು ಹಿರಿಯ ಶಾಸಕ, ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ವಹಿಸಿಕೊಂಡಿದ್ದಾರೆ. ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿದೆ.
ಹಂಗಾಮಿ ಸ್ಪೀಕರ್ ಅವರಿಗೆ ರಾಜ್ಯಪಾಲರು ಪ್ರಮಾಣವಚನ ಬೋಧಿಸಿದರು. ಅದಾದ ಬಳಿಕ ವಿಧಾನಸಭೆಯಲ್ಲಿ ಶಾಸಕರಿಗೆ ಪ್ರಮಾಣವಚನ ಬೋಧನೆ ಆರಂಭಗೊಂಡಿತು.
ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಜೊತೆ ಸಚಿವರಾಗಿರುವ ಡಾ. ಜಿ. ಪರಮೇಶ್ವರ್, ಕೆ.ಎಚ್.ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ.ಪಾಟೀಲ, ಪ್ರಿಯಾಂಕ್ ಖರ್ಗೆ ಕೂಡ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದರು.
ಕೊರಟಗೆರೆ ಕ್ಷೇತ್ರದ ಶಾಸಕರಾಗಿ ಡಾ.ಜಿ.ಪರಮೇಶ್ವರ್ ಅವರು ಸಂವಿಧಾನದ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರೆ, ದೇವನಹಳ್ಳಿ ಶಾಸಕರಾಗಿ ಕೆ.ಹೆಚ್.ಮುನಿಯಪ್ಪ, ಸರ್ವಜ್ಞನಗರ ಕ್ಷೇತ್ರದ ಶಾಸಕರಾಗಿ ಕೆ.ಜೆ.ಜಾರ್ಜ್, ಬಬಲೇಶ್ವರ ಕ್ಷೇತ್ರದ ಶಾಸಕರಾಗಿ ಎಂ.ಬಿ.ಪಾಟೀಲ್ ಭಗವಂತನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
#WATCH | Bengaluru: Karnataka Governor Thaawarchand Gehlot administers oath of office; senior Congress leader RV Deshpande becomes pro-tem Speaker pic.twitter.com/lvGzK61VJh
— ANI (@ANI) May 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.