ಬೆಳ್ತಂಗಡಿ : 19 ನೇ ವರ್ಷದ ಉಂಡೆ ಮನೆ ಪ್ರಶಸ್ತಿಯನ್ನು ಸೆ.26ರಂದು ಹೊಸದಿಗಂತ ಪತ್ರಿಕೆಯ ಮಂಗಳೂರು ಆವೃತ್ತಿಯ ಸ್ಥಾನೀಯ ಸಂಪಾದಕ ಪ್ರಕಾಶ್ ಇಳಂತಿಲ ಅವರಿಗೆ ಪ್ರದಾನ ಮಾಡಲಾಗುವುದು ಎಂದು ಉಂಡೆಮನೆ ಶಂಭು ಭಟ್ಟರ ಸವಿನೆನಪಿನ ಶಿಕ್ಷಣ ಪ್ರೋತ್ಸಾಹ ಯೋಜನೆಯ ಸಂಚಾಲಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
1993ರಿಂದ ಹೊಸದಿಗಂತದಲ್ಲಿ ಅನ್ಯಾನ್ಯ ಜವಾಬ್ದಾರಿಗಳನ್ನು ನಿರ್ವಹಿಸುತ್ತ ಬಂದಿರುವ ಇಳಂತಿಲ ಇವರ ಕರ್ತವ್ಯ ಪರತೆ, ಸೇವಾ ಮನೋಭಾವ, ವೃತ್ತಿನಿಷ್ಠೆ, ರಾಷ್ಟ್ರೀಯ ವಿಚಾರಗಳಲ್ಲಿರುವ ಆಸಕ್ತಿ, ಅವುಗಳನ್ನು ಅನುಷ್ಠಾನಗೊಳಿಸುವಲ್ಲಿ ತ್ರಿಕರಣಪೂರ್ವಕ ಸಾಧನೆ, ಬಿಡುವಿನ ಸಮಯದಲ್ಲಿ ಮಾಡುವ ಸಮಾಜ ಸೇವೆ, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿನ ಸಕ್ರೀಯತೆ ಮತ್ತು ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಸ್ವಾಮೀಜಿಯವರ ಸೇವಾಕಾರ್ಯಗಳಲ್ಲಿ ತೊಡಗಿಸಿಕೊಳ್ಳುವಿಕೆಯನ್ನು ಗುರುತಿಸಿ ಈ ಪ್ರಶಸ್ತಿಯನ್ನು ನೀಡಲಾಗುವುದು.
ಇಳಂತಿಲ ಅವರು ಕೂವೆತ್ತಂಡದ ನಿವೃತ್ತ ಶಿಕ್ಷಕ ಕೆ.ಸುಬ್ಬಣ್ಣ ಭಟ್, ಜಯಲಕ್ಷ್ಮೀದಂಪತಿ ಪುತ್ರ. ಇವರಿಗೆ ಬೆಂಗಳೂರಿನ ಗಿರಿನಗರದಲ್ಲಿರುವ ಶ್ರೀರಾಮಾಶ್ರಮದಲ್ಲಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪಕಟಣೆಯಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.