ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರಿಗೆ ಫಿಜಿ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಜಾಗತಿಕ ನಾಯಕತ್ವಕ್ಕಾಗಿ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ಮೋದಿ ಫಿಜಿ ಪ್ರಧಾನಿ ಸಿಟಿವೇನಿ ರಬುಕಾ ಅವರಿಂದ ಸ್ವೀಕರಿಸಿದರು.
ಜಪಾನ್ನ ಹಿರೋಷಿಮಾದಲ್ಲಿ ನಡೆದ ಗ್ರೂಪ್ ಆಫ್ ಸೆವೆನ್ (ಜಿ7) ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಮೋದಿಯವರು ಮೂರು ರಾಷ್ಟ್ರಗಳ ಪ್ರವಾಸದ ಭಾಗವಾಗಿ ಪಪುವಾ ನ್ಯೂ ಗಿನಿಯಾಗೆ ಭೇಟಿ ನೀಡಿದ್ದಾರೆ. ಪೋರ್ಟ್ ಮೊರೆಸ್ಬಿಗೆ ಆಗಮಿಸಿದ ಮೋದಿಯವರನ್ನು ಪಪುವಾ ನ್ಯೂಗಿನಿಯಾ ಪ್ರಧಾನಿ ಜೇಮ್ಸ್ ಮರಾಪೆ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಅಚ್ಚರಿ ಎಂಬಂತೆ, ಜೇಮ್ಸ್ ಮರಾಪೆ ಅವರು ಮೋದಿಯವರ ಕಾಲು ಮುಟ್ಟಿ ನಮಸ್ಕರಿಸಿ ಆಶೀರ್ವಾದ ಪಡೆದರು. ಇದೀಗ ಮೋದಿಯವರಿಗೆ ಫಿಜಿಯ ಅತ್ಯುನ್ನತ ಗೌರವವನ್ನು ನೀಡಲಾಗಿದೆ.
ಪ್ರಧಾನಿ ಮೋದಿಯವರ ಜಾಗತಿಕ ನಾಯಕತ್ವಕ್ಕಾಗಿ “ದಿ ಕಂಪ್ಯಾನಿಯನ್ ಆಫ್ ದಿ ಆರ್ಡರ್ ಆಫ್ ಫಿಜಿ” ಪ್ರಶಸ್ತಿಯನ್ನು ನೀಡಲಾಯಿತು. ಪ್ರಧಾನಿ ಮೋದಿ ಅವರು ತಮ್ಮ ಫಿಜಿ ಕೌಂಟರ್ ಸಿಟಿವೇನಿ ರಬುಕಾ ಅವರಿಂದ ಪದಕವನ್ನು ಸ್ವೀಕರಿಸಿದರು.
Papua New Guinea conferred the Companion of the Order of Logohu to PM Narendra Modi for championing the cause of unity of Pacific Island countries and spearheading the cause of Global South. Very few non-residents of Papua New Guinea have received this award.
This comes… pic.twitter.com/WIisl81rGs
— ANI (@ANI) May 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.