ಶ್ರೀನಗರ: ಭದ್ರತಾ ಪಡೆಗಳ ಭಾರೀ ಕಣ್ಗಾವಲಿನಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಜಿ20 ಪ್ರವಾಸೋದ್ಯಮ ಕಾರ್ಯಪಡೆ ಗುಂಪಿನ ಶೃಂಗಸಭೆ ಇಂದು ನಡೆಯುತ್ತಿದೆ. ಈ ಶೃಂಗಸಭೆಯಲ್ಲಿ ಖ್ಯಾತ ನಟ ರಾಮ್ ಚರಣ್ ಭಾಗವಹಿಸುತ್ತಿದ್ದಾರೆ. ಇದಕ್ಕಾಗಿ ಇಂದು ಅವರು ಶ್ರೀನಗರಕ್ಕೆ ಆಗಮಿಸಿದ್ದಾರೆ.
ಮೂರು ದಿನಗಳ ಕಾರ್ಯಕ್ರಮ ಮೇ 22 ರಿಂದ ಮೇ 24 ರವರೆಗೆ ನಡೆಯಲಿದೆ. ಇದು ಪ್ರಮುಖ ಆರ್ಥಿಕತೆಗಳು ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಿದೆ.
ಸೋಮವಾರ ಮಧ್ಯಾಹ್ನ ಶ್ರೀನಗರ ವಿಮಾನ ನಿಲ್ದಾಣದಲ್ಲಿ ಆರ್ಆರ್ಆರ್ ಸಿನಿಮಾದ ಜನಪ್ರಿಯ ನಟ ಕಾಣಿಸಿಕೊಂಡಿದ್ದಾರೆ. ಅವರು 3ನೇ G20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯ ‘ಆರ್ಥಿಕ ಬೆಳವಣಿಗೆ ಮತ್ತು ಸಾಂಸ್ಕೃತಿಕ ಸಂರಕ್ಷಣೆಗಾಗಿ ಚಲನಚಿತ್ರ ಪ್ರವಾಸೋದ್ಯಮ’ ಮೊದಲ ಭಾಗದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ವರದಿಯಾಗಿದೆ.
ಶ್ರೀನಗರ ವಿಮಾನನಿಲ್ದಾಣಕ್ಕೆ ಬಂದಿಳಿಯುವ ಹಲವಾರು ಚಿತ್ರಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಕಾಣಿಸಿಕೊಂಡಿವೆ.
ಸುಮಾರು 60 ವಿದೇಶಿ ಪ್ರತಿನಿಧಿಗಳು ಶ್ರೀನಗರಕ್ಕೆ ಮುಂಜಾನೆ ಆಗಮಿಸಿದ್ದು, ಶೃಂಗಸಭೆಯಲ್ಲಿ ಭಾಗಿಯಾಗಲಿದ್ದಾರೆ. ಆಗಸ್ಟ್ 2019 ರಲ್ಲಿ ಆರ್ಟಿಕಲ್ 370 ರದ್ದತಿ ಮತ್ತು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಅನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಮೊದಲ ಅಂತರರಾಷ್ಟ್ರೀಯ ಸಭೆ ಇದಾಗಿದೆ.
J&K | Actor Ram Charan arrives at Srinagar airport to attend the first side event on ‘Film Tourism for Economic Growth and Cultural Preservation’ of the 3rd #G20 Tourism Working Group meeting.
(Pic Source: DIPR) pic.twitter.com/0lXOerfo4G
— ANI (@ANI) May 22, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.