ಬೆಂಗಳೂರು: ಮಾಜಿ ಸಚಿವ ಹಾಗೂ ಮಂಗಳೂರು ಶಾಸಕ ಯು.ಟಿ ಖಾದರ್ ಅವರು ವಿಧಾನಸಭೆ ಸ್ಪೀಕರ್ ಹುದ್ದೆಗೆ ಇಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದ್ದಾರೆ. ವಿಧಾನಸಭೆ ಕಾರ್ಯದರ್ಶಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದು, ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಜಮೀರ್ ಅಹ್ಮದ್, ಶಾಸಕ ಅಜಯ್ ಸಿಂಗ್ ಉಪಸ್ಥಿತರಿದ್ದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಖಾದರ್ ಹೆಸರನ್ನು ಪ್ರಸ್ತಾಪಿಸಿದರು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೆಸರನ್ನು ಅನುಮೋದಿಸಿದರು. ಬಳಿಕ ನಾಮಪತ್ರವನ್ನು ವಿಧಾನಸಭಾ ಕಾರ್ಯದರ್ಶಿ ವಿಶಾಲಾಕ್ಷಿ ಇವರಿಗೆ ಸಲ್ಲಿಕೆ ಮಾಡಲಾಯಿತು.
ನಿನ್ನೆ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮಾಜಿ ಸಚಿವ ಆರ್. ವಿ ದೇಶಪಾಂಡೆ ಅವರನ್ನು ಹಂಗಾಮಿ ಸಭಾಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಹಂಗಾಮಿ ಸ್ಪೀಕರ್ ವಿಶ್ರಾಂತಿಗೆಂದು ತೆರಳಿದ ಸಂದರ್ಭದಲ್ಲಿ ಪೀಠದಲ್ಲಿ ಸೋಮವಾರ ಕೆಲ ಹೊತ್ತು ಯು.ಟಿ ಖಾದರ್ ಅವರು ಕುಳಿತುಕೊಂಡಿದ್ದರು. ಇದೀಗ ಯು.ಟಿ ಖಾದರ್ ಅವರನ್ನು ಸ್ಪೀಕರ್ ಆಗಿ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ.
2018 ರ ಮೈತ್ರಿ ಸರಕಾರದಲ್ಲಿ ಖಾದರ್ ಅವರು ನಗರಾಭಿವೃದ್ಧಿ ಮತ್ತು ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. 2021 ರಲ್ಲಿ ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕರಾಗಿ ಆಯ್ಕೆಯಾಗಿದ್ದರು.
ಪಕ್ಷದ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ಸಲಹೆಯಂತೆ ಖಾದರ್ ಅವರು ಸ್ಪೀಕರ್ ಹುದ್ದೆಯನ್ನು ಒಪ್ಪಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
#WATCH | Bengaluru | Karnataka Congress leader and 5-time MLA, UT Khader files nomination for the Speaker of Vidhana Soudha.
The 5-time MLA is set to become the youngest Speaker of the State Assembly. pic.twitter.com/ZbAkLY9XPN
— ANI (@ANI) May 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.