ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಬಗೆಗಿನ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ಗುಜರಾತ್ ಮೂಲದ ಲಾಭ ರಹಿತ ಸಂಸ್ಥೆ ಬಿಬಿಸಿ ವಿರುದ್ಧ 10 ಸಾವಿರ ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆಯನ್ನು ಹೂಡಿದ್ದು, ಇದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಬಿಬಿಸಿಗೆ ನೋಟಿಸ್ ಜಾರಿ ಮಾಡಿದೆ.
ಈ ವಿವಾದಾತ್ಮಕ ಸಾಕ್ಷ್ಯಚಿತ್ರವು 2002 ರ ಗುಜರಾತ್ ಗಲಭೆಗಳ ಸಂದರ್ಭದಲ್ಲಿ ಮೋದಿ ಆ ರಾಜ್ಯದ ಮುಖ್ಯಮಂತ್ರಿಯಾಗಿ ನಡೆಸಿದ ಕಾರ್ಯಗಳನ್ನು ನಾಕಾರಾತ್ಮಕವಾಗಿ ತೋರಿಸಿದೆ. ಗಲಭೆಗೆ ಸಂಬಂಧಿಸಿದಂತೆ ಮೋದಿಯನ್ನು ದೂಷಣೆ ಮಾಡುವುದು ಈ ಸಾಕ್ಷ್ಯಚಿತ್ರದ ಮುಖ್ಯ ಗುರಿಯಾಗಿದೆ.
ಭಾರತಕ್ಕೆ ದುರುದ್ದೇಶಪೂರಿತವಾಗಿ ಮಾನಹಾನಿ ಮಾಡುವ ಸಾಕ್ಷ್ಯಚಿತ್ರ ಪ್ರಸಾರ ಮಾಡಿದ ಆರೋಪದ ಮೇಲೆ ಬಿಬಿಸಿ ವಿರುದ್ಧ ಗುಜರಾತ್ ಮೂಲದ ಲಾಭರಹಿತ ಸಂಸ್ಥೆಯ ಪರ ವಕೀಲ ಸಿದ್ಧಾರ್ಥ್ ಶರ್ಮಾ ಅವರು ದಾಖಲಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡಲಾಗಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 23ಕ್ಕೆ ನಿಗದಿಪಡಿಸಲಾಗಿದೆ.
ಬಿಬಿಸಿಯ ಮೋದಿ ಬಗೆಗಿನ ಸಾಕ್ಷ್ಯಚಿತ್ರವನ್ನು ಸರ್ಕಾರ ಪಕ್ಷಪಾತಿ ಎಂದು ಕರೆದಿದೆ. ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ, “ಇದು ಸತ್ಯವನ್ನು ಮರೆಮಾಚಲು ವಿನ್ಯಾಸಗೊಳಿಸಲಾದ ಪ್ರಚಾರದ ತುಣುಕು ಎಂದು ನಾವು ಭಾವಿಸುತ್ತೇವೆ. ಪಕ್ಷಪಾತ, ವಸ್ತುನಿಷ್ಠತೆಯ ಕೊರತೆ ಮತ್ತು ವಸಾಹತುಶಾಹಿ ಮನಸ್ಥಿತಿಯನ್ನು ಮುಂದುವರೆಸುವ ಪ್ರಯತ್ನವಾಗಿ ಇದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದಿದ್ದರು.
ಸಾಕ್ಷ್ಯಚಿತ್ರವು ಸುಳ್ಳು ನಿರೂಪಣೆಯನ್ನು ದುರುಪಯೋಗಪಡಿಸಿಕೊಳ್ಳುವ ಸಂಸ್ಥೆ ಮತ್ತು ವ್ಯಕ್ತಿಗಳ ಪ್ರತಿಬಿಂಬವಾಗಿದೆ ಎಂದು ಬಾಗ್ಚಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.