ನವದೆಹಲಿ: ಜಮ್ಮು-ಕಾಶ್ಮೀರ ಪ್ರಸ್ತುತ ಸಮಾಜದ ಮುಖ್ಯ ವಾಹಿನಿಯತ್ತ ಮರಳುತ್ತಿದ್ದು, ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ತನ್ನತ್ತ ಆಕರ್ಷಿಸುತ್ತಿದೆ.
ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಕಾರ್ಯದರ್ಶಿ ಅಪೂರ್ವ ಚಂದ್ರ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡುವಂತೆ ಪ್ರವಾಸಿಗರನ್ನು ಕೇಳಿಕೊಂಡಿದ್ದಾರೆ. ಅಲ್ಲಿ ಕಾನೂನು ಸುವ್ಯವಸ್ಥೆ ಸುಧಾರಿಸಿದೆ ಮತ್ತು ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
ಮಂಗಳವಾರ ಮಧ್ಯಾಹ್ನ ಶ್ರೀನಗರದಲ್ಲಿ ನಡೆದ 3ನೇ ಜಿ20 ಪ್ರವಾಸೋದ್ಯಮ ವರ್ಕಿಂಗ್ ಗ್ರೂಪ್ ಸಭೆಯ ನೇಪಥ್ಯದಲ್ಲಿ ಮಾತನಾಡಿದ ಅವರು, ಕಳೆದ ವರ್ಷ ದಾಖಲೆಯ 26 ಲಕ್ಷಕ್ಕೂ ಹೆಚ್ಚು ಪ್ರವಾಸಿಗರು ಕಾಶ್ಮೀರ ಕಣಿವೆಗೆ ಭೇಟಿ ನೀಡಿದ್ದರು ಎಂದಿದ್ದಾರೆ.
ಭಾರತವನ್ನು ನೆಚ್ಚಿನ ತಾಣವನ್ನಾಗಿ ಮಾಡುವ ಉದ್ದೇಶದಿಂದ ಸಚಿವಾಲಯವು ವಿದೇಶಿ ಚಲನಚಿತ್ರ ನಿರ್ಮಾಪಕರಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಹೇಳಿದರು. ಹೆಚ್ಚಿನ ಚಿತ್ರ ನಿರ್ಮಾಪಕರು ತಮ್ಮ ಸಿನಿಮಾಗಳ ಚಿತ್ರೀಕರಣಕ್ಕಾಗಿ ಕಾಶ್ಮೀರಕ್ಕೆ ಭೇಟಿ ನೀಡುತ್ತಾರೆ ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದರು. ಕಾಶ್ಮೀರದಲ್ಲಿ ಜಿ20 ಶೃಂಗಸಭೆಯ ಆಯೋಜನೆ ಜಗತ್ತಿಗೆ ಮಹತ್ವದ ಸಂದೇಶವನ್ನು ಸಾರಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.