ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಉತ್ತರಾಖಂಡ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ.
ಇದು ಉತ್ತರಾಖಂಡದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದೆ. ಈ ವೇಳೆ ಮಾತನಾಡಿದ ಮೋದಿ, “ನಾನು ಇತ್ತೀಚೆಗೆ ಮೂರು ದೇಶಗಳಿಗೆ ಭೇಟಿ ನೀಡಿ ಹಿಂತಿರುಗಿದ್ದೇನೆ. ಇಂದು ಇಡೀ ಜಗತ್ತು ಭಾರತದತ್ತ ಹೆಚ್ಚಿನ ನಿರೀಕ್ಷೆಯಿಂದ ನೋಡುತ್ತಿದೆ. ನಾವು ಭಾರತೀಯರು ನಮ್ಮ ಆರ್ಥಿಕತೆಯನ್ನು ಬಲಪಡಿಸಿದ ರೀತಿ ಇಡೀ ಪ್ರಪಂಚಕ್ಕೆ ಆತ್ಮವಿಶ್ವಾಸವನ್ನು ತುಂಬಿದೆ. ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಉತ್ತರಾಖಂಡದ ಎಲ್ಲಾ ಜನರಿಗೆ ಅಭಿನಂದನೆಗಳು ಎಂದಿದ್ದಾರೆ,
ದೆಹಲಿ ಮತ್ತು ಡೆಹ್ರಾಡೂನ್ ನಡುವೆ ಚಲಿಸುವ ಈ ರೈಲು ದೇಶದ ರಾಜಧಾನಿಯನ್ನು ದೇವಭೂಮಿಯೊಂದಿಗೆ ವೇಗವಾಗಿ ಸಂಪರ್ಕಿಸುತ್ತದೆ. ಈಗ ದೆಹಲಿ-ಡೆಹ್ರಾಡೂನ್ ನಡುವಿನ ವಂದೇ ಭಾರತ್ ನಡುವಿನ ರೈಲು ಪ್ರಯಾಣದ ಸಮಯ ಗಣನೀಯವಾಗಿ ಕಡಿಮೆಯಾಗಲಿದೆ” ಎಂದರು.
ಈ ರೈಲು 17:50 ಕ್ಕೆ ಆನಂದ್ ವಿಹಾರ್ ರೈಲು ನಿಲ್ದಾಣದಿಂದ ಡೆಹ್ರಾಡೂನ್ಗೆ ಹೊರಡುತ್ತದೆ. 22:35 ಕ್ಕೆ ಡೆಹ್ರಾಡೂನ್ಗೆ ಆಗಮಿಸುತ್ತದೆ. ಇದು ಮೀರತ್ ನಗರ, ಮುಜಾಫರ್ನಗರ, ಸಹರಾನ್ಪುರ, ರೂರ್ಕಿ ಮತ್ತು ಹರಿದ್ವಾರದಲ್ಲಿ ನಿಲುಗಡೆ ಹೊಂದಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.