ನವದೆಹಲಿ: ಅಮೆರಿಕದ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಅವರು ಮುಂದಿನ ವಾರ ಭಾರತಕ್ಕೆ ಭೇಟಿ ನೀಡಲಿದ್ದು, ಭಾರತೀಯ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ.
ಮೂಲಗಳ ಪ್ರಕಾರ, ಯುನೈಟೆಡ್ ಸ್ಟೇಟ್ಸ್ ಮತ್ತು ಭಾರತವು ತಮ್ಮ ಸಂಬಂಧವನ್ನು ಇನ್ನಷ್ಟು ಬಲಪಡಿಸಲು ಬಯಸುತ್ತಿರುವ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಆಸ್ಟಿನ್ ಯುಎಸ್-ಭಾರತದ ರಕ್ಷಣಾ ಪಾಲುದಾರಿಕೆಯನ್ನು ಆಧುನೀಕರಿಸುವುದನ್ನು ಮುಂದುವರಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ.
ಮುಂದಿನ ತಿಂಗಳು ಶ್ವೇತಭವನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಅಧಿಕೃತ ಭೇಟಿಗೂ ಮುನ್ನ ಆಸ್ಟಿನ್ ಅವರ ಭೇಟಿ ನಡೆಯುತ್ತಿರುವುದು ಮಹತ್ವ ಪಡೆದುಕೊಂಡಿದೆ. ದ್ವಿಪಕ್ಷೀಯ ರಕ್ಷಣಾ ಸಹಕಾರದ ಕುರಿತು ಚರ್ಚಿಸಲು ಯುಎಸ್ ರಕ್ಷಣಾ ಕಾರ್ಯದರ್ಶಿ ಲಾಯ್ಡ್ ಆಸ್ಟಿನ್ ಜೂನ್ ಆರಂಭದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಇಂಡೋ-ಪೆಸಿಫಿಕ್ ಭದ್ರತಾ ವ್ಯವಹಾರಗಳ ಸಹಾಯಕ ಕಾರ್ಯದರ್ಶಿ ಎಲಿ ರಾಟ್ನರ್ ಹೇಳಿದ್ದಾರೆ.
ಈ ಭೇಟಿಯು ಹೊಸ ರಕ್ಷಣಾ ನಾವೀನ್ಯತೆ ಮತ್ತು ಕೈಗಾರಿಕಾ ಸಹಕಾರ ಉಪಕ್ರಮಗಳನ್ನು ವೇಗಗೊಳಿಸಲು ಇದು ಅವಕಾಶವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.