ನವದೆಹಲಿ: ಮೇ 28 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಕಟ್ಟಡವನ್ನು ಉದ್ಘಾಟಿಸಬೇಕು ಎಂದು ನಿರ್ದೇಶನ ನೀಡುವಂತೆ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
‘ಭಾರತದ ಪ್ರಥಮ ಪ್ರಜೆ ಮತ್ತು ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥೆ’ ಆಗಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೂತನ ಸಂಸತ್ ಭವನದ ಉದ್ಘಾಟನೆಗೆ ಲೋಕಸಭೆಯ ಸೆಕ್ರೆಟರಿಯೇಟ್ಗೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಗುರುವಾರ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು.
ತಮಿಳುನಾಡು ಮೂಲದ ಜಯಾ ಸುಕಿನ್ ಎಂಬ ಸುಪ್ರೀಂಕೋರ್ಟ್ ವಕೀಲರು ಅರ್ಜಿ ಸಲ್ಲಿಸಿದ್ದರು. ರಾಷ್ಟ್ರಪತಿಗಳು ಮತ್ತು ಉಭಯ ಸದನಗಳು ಸಂಸತ್ತಿನ ಭಾಗವಾಗಿರುವುದರಿಂದ, ಶಂಕುಸ್ಥಾಪನೆ ಸಮಾರಂಭ ಮತ್ತು ಕಟ್ಟಡದ ಉದ್ಘಾಟನೆಯಿಂದ ರಾಷ್ಟ್ರಪತಿಯನ್ನು ಹೊರಗಿಡುವುದು ಸರ್ಕಾರದ ದುರುಪಯೋಗವನ್ನು ಸೂಚಿಸುತ್ತದೆ ಎಂದು ಪಿಐಎಲ್ನಲ್ಲಿ ಅವರು ವಾದಿಸಿದ್ದರು.
ಆದರೆ ಈ ಅರ್ಜಿಯನ್ನು ಪುರಸ್ಕರಿಸಲು ಸುಪ್ರೀಂಕೋರ್ಟ್ ಇಂದು ನಿರಾಕರಿಸಿದೆ. ಇನ್ನೊಂದೆಡೆ ರಾಷ್ಟ್ರಪತಿಗಳಿಂದ ಸಂಸತ್ ಭವನದ ಉದ್ಘಾಟನೆಯಾಗುತ್ತಿಲ್ಲ ಎಂಬ ನೆಪವೊಡ್ಡಿ 19 ಪ್ರತಿಪಕ್ಷಗಳು ಉದ್ಘಾಟನಾ ಸಮಾರಂಭವನ್ನು ಬಹಿಷ್ಕರಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.