ನವದೆಹಲಿ: ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೈಗೆಟುಕುವ ಮತ್ತು ಗುಣಮಟ್ಟದ ಉತ್ಪನ್ನಗಳ ಉತ್ಪಾದನೆಗೆ ಗಮನಹರಿಸುವಂತೆ ಫಾರ್ಮಾ ಮತ್ತು ವೈದ್ಯಕೀಯ ಸಾಧನಗಳ ಉದ್ಯಮಗಳಿಗೆ ಕೇಳಿಕೊಂಡಿದ್ದಾರೆ.
ನವದೆಹಲಿಯಲ್ಲಿ ಇಂದು ಔಷಧ ಮತ್ತು ವೈದ್ಯಕೀಯ ಸಾಧನ ವಲಯದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸ್ಪರ್ಧಾತ್ಮಕ ಉದ್ಯಮದಲ್ಲಿ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಮತ್ತು ಅದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ.
ದೇಶದಲ್ಲಿ ಅತ್ಯುತ್ತಮ ಔಷಧಗಳು ಮತ್ತು ವೈದ್ಯಕೀಯ ಸಾಧನಗಳ ಉತ್ಪಾದನೆಯನ್ನು ಖಚಿತಪಡಿಸಿಕೊಳ್ಳಲು ಜಂಟಿ ಪ್ರಯತ್ನಗಳ ಅಗತ್ಯವನ್ನು ಅವರು ಒತ್ತಿ ಹೇಳಿದರು. ಉದ್ಯಮಕ್ಕೆ ಉತ್ತೇಜನ ನೀಡಲು ಸರ್ಕಾರವು ಮೂಲ ರಾಸಾಯನಿಕಗಳಿಗೆ ಉತ್ಪಾದನಾ ಸಂಬಂಧಿತ ಪ್ರೋತ್ಸಾಹ ಯೋಜನೆಯನ್ನು ತರಲಿದೆ ಎಂದು ಅವರು ಮಾಹಿತಿ ನೀಡಿದರು.
ನರೇಂದ್ರ ಮೋದಿ ಸರ್ಕಾರ ಬಡವರ ಮತ್ತು ರೈತರ ಪರವಾಗಿದೆ, ಆದರೆ ಅದು ಉದ್ಯಮವು ಬೆಳೆಯಬೇಕೆಂದು ಬಯಸುತ್ತದೆ ಎಂದು ಡಾ ಮಾಂಡವಿಯಾ ಒತ್ತಿ ಹೇಳಿದರು.
ಕೋವಿಡ್-19 ಅವಧಿಯಲ್ಲಿ ಭಾರತವು ತನ್ನ ಅವಶ್ಯಕತೆಗಳನ್ನು ಪೂರೈಸಿದೆ ಮಾತ್ರವಲ್ಲದೆ ಇತರ ದೇಶಗಳಿಗೆ ಸಹಾಯವನ್ನು ನೀಡಿದೆ ಎಂದು ಸಚಿವರು ಫಾರ್ಮ್ ಉದ್ಯಮದ ಕೆಲಸವನ್ನು ಶ್ಲಾಘಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.