ಬೆಂಗಳೂರು: ಸಿದ್ದರಾಮಯ್ಯ ಸರ್ಕಾರದ ಸಚಿವರ ಖಾತೆ ಹಂಚಿಕೆ ಪಟ್ಟಿಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಅನುಮೋದನೆ ನೀಡಿದ್ದು, ಇಂದು ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಣಕಾಸು, ಐಟಿ-ಬಿಟಿ, ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ತಮ್ಮೊಂದಿಗೆ ಇಟ್ಟುಕೊಂಡಿದ್ದಾರೆ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಬೃಹತ್ ಮತ್ತು ಮಧ್ಯಮ ನೀರಾವರಿ ಮತ್ತು ಬೆಂಗಳೂರು ನಗರಾಭಿವೃದ್ಧಿ ಖಾತೆಯನ್ನು ನೀಡಲಾಗಿದೆ.
ಗೃಹ ಇಲಾಖೆಯನ್ನು ಡಾ.ಜಿ.ಪರಮೇಶ್ವರ ಅವರಿಗೆ ನೀಡಲಾಗಿದ್ದು, ಗುಪ್ತಚರ ಇಲಾಖೆಯನ್ನು ಸಿದ್ದರಾಮಯ್ಯ ಅವರೇ ನಿರ್ವಹಿಸಲಿದ್ದಾರೆ.
ಎಚ್ ಕೆ ಪಾಟೀಲ್ ಅವರಿಗೆ ಕಾನೂನು ಮತ್ತು ಸಂಸದೀಯ, ಪ್ರವಾಸೋದ್ಯಮ ಖಾತೆ ನೀಡಲಾಗಿದೆ. ಕೆ.ಹೆಚ್.ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು ವ್ಯವಹಾರ ಖಾತೆ ನೀಡಲಾಗಿದೆ. ರಾಮಲಿಂಗರೆಡ್ಡಿ ಅವರಿಗೆ ಸಾರಿಗೆ ಮತ್ತು ಮುಜರಾಯಿ ಖಾತೆ ನೀಡಲಾಗಿದೆ. ಎಂ.ಬಿ.ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ನೀಡಲಾಗಿದೆ. ಕೆ.ಜೆ.ಜಾರ್ಜ್ ಅವರಿಗೆ ಇಂಧನ ಖಾತೆ ನೀಡಲಾಗಿದೆ. ದಿನೇಶ್ ಗುಂಡೂರಾವ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ನೀಡಲಾಗಿದೆ. ಹೆಚ್ ಸಿ ಮಹದೇವಪ್ಪ ಅವರಿಗೆ ಸಮಾಜಕಲ್ಯಾಣ ಮತ್ತು ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಸಚಿವಾಲಯವನ್ನು ನೀಡಲಾಗಿದೆ.
ಕೃಷ್ಣ ಬೈರೇಗೌಡ ಅವರಿಗೆ ಕಂದಾಯ, ಪ್ರಿಯಾಂಕ್ ಖರ್ಗೆ ವರಿಗೆ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್ ಶಿವಾನಂದ ಪಾಟೀಲ್ ಅವರಿಗೆ ಜವಳಿ, ಸಕ್ಕರೆ, ಸಹಕಾರ ಇಲಾಖೆಯ ಕೃಷಿ ಮಾರುಕಟ್ಟೆ, ಜಮೀರ್ ಅಹಮದ್ ಖಾನ್ ಅವರಿಗೆ ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಖಾತೆ, ಶರಣುಬಸಪ್ಪ ದರ್ಶನಾಪುರ್ ಅವರಿಗೆ ಸಣ್ಣ ಕೈಗಾರಿಕೆ, ಸಾರ್ವಜನಿಕ ಉದ್ದಿಮೆಗಳು, ಈಶ್ವರ್ ಖಂಡ್ರೆ ಅವರಿಗೆ ಅರಣ್ಯ ಮತ್ತು ಪರಿಸರ ಖಾತೆ, ಚಲುವರಾಯಸ್ವಾಮಿ ಅವರಿಗೆ ಕೃಷಿ, ಎಸ್.ಎಸ್.ಮಲ್ಲಿಕಾರ್ಜುನ ಅವರಿಗೆ ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ, ರಹೀ ಖಾನ್ ಅವರಿಗೆ ಪೌರಾಡಳಿತ, ಹಜ್ ಖಾತೆ ನೀಡಲಾಗಿದೆ.
ಸಂತೋಷ ಲಾಡ್ ಅವರಿಗೆ ಕಾರ್ಮಿಕ, ಡಾ.ಶರಣುಪ್ರಕಾಶ್ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆರ್.ಬಿ.ತಿಮ್ಮಾಪುರ ಅವರಿಗೆ ಅಬಕಾರಿ, ಕೆ.ವೆಂಕಟೇಶ್ ಅವರಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ, ಶಿವರಾಜ್ ತಂಗಡಗಿ ಅವರಿಗೆ ಹಿಂದುಳಿದ ವರ್ಗ, ಕನ್ನಡ ಮತ್ತು ಸಂಸ್ಕೃತಿ, ಡಿ.ಸುಧಾಕರ್ ಅವರಿಗೆ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ, ಬಿ.ನಾಗೇಂದ್ರ ಅವರಿಗೆ ಯುವಜನ ಸೇವೆ & ಕ್ರೀಡೆ, ಪರಿಶಿಷ್ಟ ಪಂಗಡ ಕಲ್ಯಾಣ, ಕೆ.ಎನ್.ರಾಜಣ್ಣಅವರಿಗೆ ಸಹಕಾರ, ಬೈರತಿ ಸುರೇಶ್ ಅವರಿಗೆ ನಗರಾಭಿವೃದ್ಧಿ, ಪಟ್ಟಣ ಯೋಜನೆ(ಬೆಂಗಳೂರು ಹೊರತು ಪಡಿಸಿ), ಲಕ್ಷ್ಮಿ ಹೆಬ್ಬಾಳ್ಕರ್ ಅವರಿಗೆ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ, ವಿಕಲಚೇತನರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಖಾತೆ ನೀಡಲಾಗಿದೆ.
ಮಂಕಾಳ್ ವೈದ್ಯ ಅವರಿಗೆ ಮೀನುಗಾರಿಕೆ, ಬಂದರು, ಒಳನಾಡು ಸಾರಿಗೆ, ಮಧು ಬಂಗಾರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ, ಡಾ.ಎಂ.ಸಿ.ಸುಧಾಕರ್ ಅವರಿಗೆ ಉನ್ನತ ಶಿಕ್ಷಣ, ಎನ್.ಎಸ್.ಬೋಸರಾಜ್ ಅವರಿಗೆ ಸಣ್ಣ ನೀರಾವರಿ ಮತ್ತು ವಿಜ್ಞಾನ & ತಂತ್ರಜ್ಞಾನ ಖಾತೆ ನೀಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.