ನವದೆಹಲಿ: ಕ್ರೀಡೆಯನ್ನು ದುರ್ಬಲಗೊಳಿಸುವ ಅಥವಾ ಆಟಗಾರರಿಗೆ ನೋವುಂಟು ಮಾಡುವ ಯಾವುದೇ ಕ್ರಮವನ್ನು ತೆಗೆದುಕೊಳ್ಳದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಪ್ರತಿಭಟನಾ ನಿರತ ಕುಸ್ತಿಪಟುಗಳಿಗೆ ಮನವಿ ಮಾಡಿದ್ದಾರೆ. ಅಲ್ಲದೇ ತನಿಖೆ ಪೂರ್ಣಗೊಳ್ಳುವವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದರು.
ಮಹಿಳಾ ಕುಸ್ತಿಪಟುಗಳು ದಾಖಲಿಸಿರುವ ಪ್ರಕರಣಗಳು ಇನ್ನೂ ಪರಿಗಣನೆಯಲ್ಲಿವೆ ಮತ್ತು ನ್ಯಾಯಾಲಯದ ಮುಂದೆ ಸ್ಥಿತಿ ವರದಿಗಳನ್ನು ಸಲ್ಲಿಸಲಾಗುತ್ತಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮೊದಲು ಏನನ್ನೂ ಹೇಳುವುದು ಕಾರ್ಯವಿಧಾನಕ್ಕೆ ವಿರುದ್ಧವಾಗಿದೆ ಎಂದು ಪೊಲೀಸರು ಹೇಳಿದ ನಂತರ ಠಾಕೂರ್ ಹೇಳಿಕೆ ನೀಡಿದ್ದಾರೆ.0
ಲೈಂಗಿಕ ಕಿರುಕುಳದ ಆರೋಪದ ಮೇಲೆ ಮಾಜಿ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುತ್ತಿರುವ ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ಮುಳುಗಿಸುವುದಾಗಿ ಬೆದರಿಕೆ ಹಾಕಿ ನಂತರ ರೈತ ನಾಯಕನ ಮಧ್ಯಸ್ಥಿಕೆಯಿಂದ ನಿರ್ಧಾರವನ್ನು ವಾಪಾಸ್ ಪಡೆದುಕೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೇಳಿಕೆ ನೀಡಿರುವ ಠಾಕೂರ್ ಅವರು, ತಾಳ್ಮೆಯಿಂದಿರಿ ಎಂದು ಒತ್ತಾಯಿಸಿದರು. ಅಲ್ಲದೇ ಸುಪ್ರೀಂಕೋರ್ಟ್, ಕ್ರೀಡಾ ಸಚಿವಾಲಯ ಮತ್ತು ದೆಹಲಿ ಪೊಲೀಸರ ಮೇಲೆ ನಂಬಿಕೆ ಇಡುವಂತೆ ಕೇಳಿಕೊಂಡಿದ್ದಾರೆ.
ತನಿಖೆ ಪೂರ್ಣಗೊಂಡ ನಂತರ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ ಅವರು, ಡಬ್ಲ್ಯುಎಫ್ಐ ಚುನಾವಣೆ ನಡೆಸಲಿದ್ದು, ಶೀಘ್ರದಲ್ಲೇ ಹೊಸ ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.