ಚಾಮರಾಜನಗರ: ಇಂದು ಭಾರತೀಯ ವಾಯುಪಡೆಯ ತರಬೇತುದಾರ ವಿಮಾನವು ಚಾಮರಾಜನಗರದಲ್ಲಿ ತೆರೆದ ಮೈದಾನದಲ್ಲಿ ಪತನಗೊಂಡಿದೆ. ಇದರಲ್ಲಿದ್ದ ಇಬ್ಬರು ಪೈಲೆಟ್ಗಳು ಪ್ಯಾರಾಚೂಟ್ ಮೂಲಕ ಹಾರಿ ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಪೈಲಟ್ಗಳು ಇನ್ನೂ ಪತ್ತೆಯಾಗಿಲ್ಲ ಎಂದು ವರದಿಗಳು ತಿಳಿಸಿವೆ.
ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ವರದಿಗಳು ಸ್ಪಷ್ಟಪಡಿಸಿದೆ. ಭಾರತೀಯ ವಾಯುಪಡೆಯು ಘಟನೆಯ ಕುರಿತು ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ಐಎಎಫ್ನ ಕಿರಣ್ ತರಬೇತುದಾರ ವಿಮಾನವು ಇಂದು ಕರ್ನಾಟಕದ ಚಾಮರಾಜನಗರದ ಬಳಿ ದಿನನಿತ್ಯದ ತರಬೇತಿಯಲ್ಲಿದ್ದಾಗ ಪತನಗೊಂಡಿದೆ. ಇಬ್ಬರೂ ವಿಮಾನ ಸಿಬ್ಬಂದಿ ಸುರಕ್ಷಿತವಾಗಿ ಹೊರಬಂದಿದ್ದಾರೆ. ಅಪಘಾತದ ಕಾರಣವನ್ನು ಕಂಡುಹಿಡಿಯಲು ನ್ಯಾಯಾಲಯಕ್ಕೆ ಆದೇಶಿಸಲಾಗಿದೆ” ಎಂದಿದೆ.
ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಜೆಟ್ ವಿಮಾನ ಪತನಗೊಂಡು, ಹೊತ್ತಿ ಉರಿದಿದೆ. ವಿಮಾನದಲ್ಲಿದ್ದ ಇಬ್ಬರು ಪೈಲಟ್ಗಳು ಪ್ಯಾರಾಚೂಟ್ ಬಳಸಿ ವಿಮಾನದಿಂದ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ. ಘಟನಾ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಲಘು ವಿಮಾನ ಪತನಕ್ಕೆ ಕಾರಣ ಇನ್ನೂ ತಿಳಿದು ಬಂದಿಲ್ಲ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.