ಬೆಂಗಳೂರು: ಲೋಕಾಯುಕ್ತ ಪೊಲೀಸರು ಕಳೆದ ಎರಡು ದಿನಗಳಲ್ಲಿ ಬೃಹತ್ ಕಾರ್ಯಾಚರಣೆಯನ್ನು ನಡೆಸಿ ಭ್ರಷ್ಟ ಕುಳಗಳಿಂದ ಅಪಾರ ಪ್ರಮಾಣದ ಅಕ್ರಮ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಎರಡು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 15 ಭ್ರಷ್ಟ ಸರ್ಕಾರಿ ಅಧಿಕಾರಿಗಳ ಮೇಲೆ ನಡೆಸಿದ ದಾಳಿಯಲ್ಲಿ ಸುಮಾರು 48.75 ಕೋಟಿ ರೂ ಮೌಲ್ಯದ ನಗದು, ಚಿನ್ನಾಭರಣ ಮತ್ತು ಇತರ ಮೌಲ್ಯ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಮಂಗಳೂರು, ಉಡುಪಿ, ಹಾವೇರಿ, ಕೊಪ್ಪಳ ಸೇರಿದಂತೆ 57 ಕಡೆಗಳಲ್ಲಿ 15 ಮಂದಿ ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದರು. 15 ಮಂದಿಯಲ್ಲಿ ಬಿಬಿಎಂಪಿ ದಕ್ಷಿಣ ವಿಭಾಗದ (ಬೊಮ್ಮನಹಳ್ಳಿ ವಲಯ) ಕಾರ್ಯಪಾಲಕ ಎಂಜಿನಿಯರ್ ಎನ್ಜಿ ಪ್ರಮೋದ್ ಕುಮಾರ್ ಅವರ ಬಳಿ ಅಂದಾಜು 8 ಕೋಟಿ ರೂ ಮೌಲ್ಯದ ವಸ್ತುಗಳು ಪತ್ತೆಯಾಗಿವೆ.
ಹಾವೇರಿ ಉಪವಿಭಾಗದ ನಿರ್ಮಿತಿ ಕೇಂದ್ರದ ಪ್ರಾಜೆಕ್ಟ್ ಎಂಜಿನಿಯರ್ ವಾಗೀಶ್ ಬಸವಾನಂದ ಶೆಟ್ಟರ ಬಳಿ 4.75 ಕೋಟಿ ರೂಪಾಯಿ ಪತ್ತೆಯಾಗಿದೆ. ಟಿ.ವಿ.ನಾರಾಯಣಪ್ಪ ಬಳಿ 2.5 ಕೋಟಿ ರೂಪಾಯಿ, ಎಸ್.ಡಿ.ರಂಗಸ್ವಾಮಿ ಬಳಿ 2.5 ಕೋಟಿ ರೂ ಪತ್ತೆಯಾಗಿದೆ. ಹೀಗೆ 15 ಮಂದಿಯೂ ಕೋಟಿಗಟ್ಟಲೆ ಅಕ್ರಮ ಆಸ್ತಿ ಮಾಡಿರುವುದನ್ನು ಲೋಕಾಯುಕ್ತ ವಶಕ್ಕೆ ಪಡೆದುಕೊಂಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.