ವಾಷಿಂಗ್ಟನ್: ಜೂನ್ 21ರಿಂದ ಪ್ರಧಾನಿ ನರೇಂದ್ರ ಮೋದಿಯವರು ಅಮರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಆಹ್ವಾನದ ಮೇರೆಗೆ ಅಲ್ಲಿಗೆ ಭೇಟಿ ನೀಡುತ್ತಿದ್ದಾರೆ. ಪ್ರವಾಸದ ವೇಳೆ ಜನಪ್ರತಿನಿಧಿಗಳ ಜಂಟಿ ಸಭೆಯನ್ನು ಉದ್ದೇಶಿಸಿ ಮಾತನಾಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಯುಎಸ್ ಕಾಂಗ್ರೆಸ್ ನಾಯಕರು ಆಹ್ವಾನಿಸಿದ್ದಾರೆ. ಇದು ವಾಷಿಂಗ್ಟನ್ ಡಿಸಿ ವಿದೇಶಿ ನಾಯಕರಿಗೆ ನೀಡುವ ಈ ಅಪರೂಪದ ಗೌರವವವಾಗಿದೆ. ಒಂದು ವೇಳೆ ಈ ಬಾರಿ ಅವರು ಆಹ್ವಾನವನ್ನು ಸ್ವೀಕರಿಸಿದರೆ ಯುಎಸ್ ಕಾಂಗ್ರೆಸ್ ಅನ್ನು ಉದ್ದೇಶಿಸಿ ಎರಡು ಬಾರಿ ಮಾತನಾಡಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ ಪಡೆಯಲಿದ್ದಾರೆ.
2016 ರಲ್ಲಿ, ಮೋದಿ ಅವರು ಜಂಟಿಯಾಗಿ ಕಾಂಗ್ರೆಸ್ ಅನ್ನು ಉದ್ದೇಶಿಸಿ ಮಾತನಾಡಿದ್ದರು. ಅಲ್ಲದೇ ಯುಎಸ್ ಕಾಂಗ್ರೆಸ್ ಉದ್ದೇಶಿಸಿ ಮಾತನಾಡಿದ ಆರನೇ ಭಾರತೀಯ ಪ್ರಧಾನಿ ಎನಿಸಿಕೊಂಡರು. 1949 ರಲ್ಲಿ ಜವಾಹರಲಾಲ್ ನೆಹರು, 1985 ರಲ್ಲಿ ರಾಜೀವ್ ಗಾಂಧಿ, 1994 ರಲ್ಲಿ ಪಿ.ವಿ. ನರಸಿಂಹರಾವ್, 2000 ರಲ್ಲಿ ಅಟಲ್ ಬಿಹಾರಿ ವಾಜಪೇಯಿ ಮತ್ತು 2005 ರಲ್ಲಿ ಮನಮೋಹನ್ ಸಿಂಗ್ ಐದನೇ ಯುಎಸ್ ಸೆನೆಟ್ ಉದ್ದೇಶಿಸಿ ಮಾತನಾಡಿದ್ದರು.
“ನಿಮ್ಮ ಭಾಷಣದ ಸಮಯದಲ್ಲಿ, ಭಾರತದ ಭವಿಷ್ಯದ ಬಗ್ಗೆ ನಿಮ್ಮ ದೃಷ್ಟಿಕೋನವನ್ನು ಹಂಚಿಕೊಳ್ಳಲು ಮತ್ತು ನಮ್ಮ ದೇಶಗಳು ಎದುರಿಸುತ್ತಿರುವ ಜಾಗತಿಕ ಸವಾಲುಗಳ ಬಗ್ಗೆ ಮಾತನಾಡಲು ನಿಮಗೆ ಅವಕಾಶವಿದೆ” ಎಂದು ಹೌಸ್ ಸ್ಪೀಕರ್ ಕೆವಿನ್ ಮೆಕಾರ್ಥಿ, ಸೆನೆಟ್ ಬಹುಮತದ ನಾಯಕ ಚಕ್ ಶುಮರ್, ಸೆನೆಟ್ ರಿಪಬ್ಲಿಕನ್ ನಾಯಕ ಮಿಚ್ ಮೆಕ್ಕಾನ್ನೆಲ್ ಮತ್ತು ಹೌಸ್ ಡೆಮಾಕ್ರಟಿಕ್ ನಾಯಕ ಹಕೀಮ್ ಜೆಫ್ರೀಸ್ ಅವರು ಶುಕ್ರವಾರ ಮೋದಿಗೆ ಜಂಟಿಯಾಗಿ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಜೂನ್ 22 ರಂದು ಮೋದಿಗಾಗಿ ಜೋಬೈಡೆನ್ ಅವರು ಔಪಚಾರಿಕ ಭೋಜನ ಕೂಟವನ್ನು ಏರ್ಪಡಿಸಿದ್ದಾರೆ. 14 ವರ್ಷಗಳ ನಂತರ ಭಾರತೀಯ ನಾಯಕನಿಗೆ ಭೋಜನ ಕೂಟ ನೀಡಲಾಗುತ್ತಿದೆ. 2009 ರಲ್ಲಿ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು ಅಂದಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗಾಗಿ ಭೋಜನ ಕೂಟ ಏರ್ಪಡಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.