ನವದೆಹಲಿ: ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಶನಿವಾರ ಬೆಳಗ್ಗೆ ಒಡಿಶಾದ ಬಾಲಸೋರ್ನಲ್ಲಿ ನಡೆದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿದ್ದು,ಅಲ್ಲಿನ ಪರಿಸ್ಥಿತಿಯನ್ನು ಅವಲೋಕನ ಮಾಡಿದ್ದಾರೆ.
ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲೆ ಸರ್ಕಾರದ ಗಮನವಿದೆ. ಜಿಲ್ಲಾಡಳಿತದಿಂದ ಅನುಮತಿ ಪಡೆದ ನಂತರ ಪುನಶ್ಚೇತನ ಕಾರ್ಯ ಆರಂಭವಾಗಲಿದೆ. ವಿವರವಾದ ಉನ್ನತ ಮಟ್ಟದ ತನಿಖೆ ನಡೆಸಲಾಗುವುದು ಮತ್ತು ರೈಲು ಸುರಕ್ಷತಾ ಆಯುಕ್ತರು ಸ್ವತಂತ್ರ ತನಿಖೆ ನಡೆಸುತ್ತಾರೆ ಎಂದು ಸಚಿವರು ಹೇಳಿದರು.
ವೈಷ್ಣವ್ ಅವರು ಸಂತ್ರಸ್ತರಿಗೆ ಪರಿಹಾರ ಕೂಡ ಘೋಷಿಸಿದ್ದಾರೆ. ಮೃತರಾದವರಿಗೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ ಹಾಗೂ ಸಣ್ಣಪುಟ್ಟ ಗಾಯಗಳಿಗೆ 50 ಸಾವಿರ ರೂ ಪರಿಹಾರ ನೀಡಲಾಗುವುದು ಎಂದರು.
ದುರಂತ ರೈಲು ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 233 ಕ್ಕೆ ಏರಿದೆ ಮತ್ತು 900 ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಕ್ಷಣಾ ಪಡೆಗಳು, ಎನ್ಡಿಆರ್ಎಫ್ ಮತ್ತು ಒಡಿಆರ್ಎಫ್ ಸೇರಿದಂತೆ ಒಡಿಶಾ ಮತ್ತು ಪಶ್ಚಿಮ ಬಂಗಾಳದಿಂದ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ. ಗಾಯಗೊಂಡ ಪ್ರಯಾಣಿಕರನ್ನು ಬಾಲಸೋರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮತ್ತು ಹತ್ತಿರದ ಪ್ರದೇಶಗಳಲ್ಲಿನ ಇತರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.