ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಒಡಿಶಾದ ರೈಲು ಅಪಘಾತ ಸ್ಥಳಕ್ಕೆ ಭೇಟಿ ನೀಡಿ, ಸ್ಥಳಪರಿಶೀಲನೆ ಮಾಡಿದ್ದಾರೆ. ಬಳಿಕ ಅವರು ಆಸ್ಪತ್ರೆಗೆ ತೆರಳಿ ಸಂತ್ರಸ್ತರನ್ನು ಭೇಟಿ ಮಾಡಿದ್ದಾರೆ. ಇತ್ತೀಚಿನ ಅತ್ಯಂತ ಭೀಕರ ರೈಲು ಅಪಘಾತಗಳಲ್ಲಿ ಒಂದು ಎಂದು ಪರಿಗಣಿಸಲ್ಪಟ್ಟ ನಿನ್ನೆಯ ಅಪಘಾತದ ನೇರ ಪರಿಶೀಲನೆಯನ್ನು ಅವರು ಕೈಗೊಂಡರು.
ಇತ್ತೀಚಿನ ಅಂದಾಜಿನ ಪ್ರಕಾರ 261 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು 1000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ದುರಂತ ನಡೆದ ಸ್ಥಳದ ಸಮೀಪವೇ ಪ್ರಧಾನಿ ನರೇಂದ್ರ ಮೋದಿ ಅವರು ವಾಯುಪಡೆಯ ಹೆಲಿಕಾಪ್ಟರ್ನಲ್ಲಿ ಬಂದಿಳಿದರು. ಅಪಘಾತದಲ್ಲಿ ಬದುಕುಳಿದವರನ್ನು ಭೇಟಿ ಮಾಡಲು ಅವರು ಬಾಲಸೋರ್ ಜಿಲ್ಲಾ ಆಸ್ಪತ್ರೆಗೆ ತೆರಳಿದ್ದು, ಅಲ್ಲಿ ಗಾಯಾಳುಗಳನ್ನು ಭೇಟಿ ಮಾಡಲಿದ್ದಾರೆ.
ಇಂದು ಮುಂಜಾನೆ, ರೈಲು ಅಪಘಾತಕ್ಕೆ ಸಂಬಂಧಿಸಿ ಪರಿಸ್ಥಿತಿಯನ್ನು ಪರಿಶೀಲಿಸಲು ಪ್ರಧಾನಿ ಮೋದಿ ಸಭೆ ಕರೆದಿದ್ದರು.
ಎರಡು ಪ್ಯಾಸೆಂಜರ್ ರೈಲುಗಳು – ಬೆಂಗಳೂರು-ಹೌರಾ ಸೂಪರ್ಫಾಸ್ಟ್ ಎಕ್ಸ್ಪ್ರೆಸ್, ಕೋರಮಂಡಲ್ ಎಕ್ಸ್ಪ್ರೆಸ್ ಮತ್ತು ಗೂಡ್ಸ್ ರೈಲು ಅಪಘಾತಕ್ಕೀಡಾದ ರೈಲುಗಳು. ಬಾಲಸೋರ್ ಜಿಲ್ಲೆಯ ಬಹನಾಗಾ ಬಜಾರ್ ನಿಲ್ದಾಣದಲ್ಲಿ ಈ ರೈಲುಗಳು ಹಳಿ ತಪ್ಪಿ ದುರಂತ ಸಂಭವಿಸಿದೆ. ಶುಕ್ರವಾರ ಮುಸ್ಸಂಜೆ ಸಂಭವಿಸಿದ ಅಪಘಾತದಲ್ಲಿ ಪ್ಯಾಸೆಂಜರ್ ರೈಲುಗಳ 17 ಬೋಗಿಗಳು ಹಳಿ ತಪ್ಪಿ ತೀವ್ರವಾಗಿ ಹಾನಿಗೀಡಾಗಿವೆ. ಅಪಾರ ಸಾವು ನೋವು ಸಂಭವಿಸಿದೆ.
#WATCH | Odisha: PM Narendra Modi visits a hospital in Balasore to meet the injured victims of #OdishaTrainTragedy. pic.twitter.com/vP5mlj1lEC
— ANI (@ANI) June 3, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.