ನವದೆಹಲಿ: ಇಂದು ಜಗತ್ತಿನಾದ್ಯಂತ ವಿಶ್ವ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪ್ರಕೃತಿ ಮತ್ತು ಭೂಮಿಯನ್ನು ರಕ್ಷಿಸಲು ಸಕಾರಾತ್ಮಕ ಪರಿಸರ ಕ್ರಮಗಳನ್ನು ಕೈಗೊಳ್ಳಲು ಜಾಗತಿಕ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಭೂಮಿಯ ಮೇಲಿನ ಜೀವವನ್ನು ಉಳಿಸಲು ಜಾಗೃತಿ ಮೂಡಿಸುವ ಸಲುವಾಗಿ ವಿಶ್ವಸಂಸ್ಥೆಯ ಪರಿಸರ ಕಾರ್ಯಕ್ರಮದ ಭಾಗವಾಗಿ 1973 ರಿಂದ ಪ್ರತಿ ವರ್ಷ ಜೂನ್ 5 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಈ ವರ್ಷ ವಿಶ್ವ ಪರಿಸರ ದಿನದ 50 ವರ್ಷಗಳನ್ನು ಆಚರಿಸಲಾಗುತ್ತಿದೆ. ಈ ವರ್ಷ ‘ಪ್ಲಾಸ್ಟಿಕ್ ಮಾಲಿನ್ಯವನ್ನು ಹೋಗಲಾಡಿಸಿಎಂಬ ವಿಷಯದೊಂದಿಗೆ ಪರಿಸರ ದಿನವನ್ನು ಆಚರಿಸಲಾಗುತ್ತಿದೆ. ಪರಿಸರಕ್ಕೆ ಸಂಬಂಧಿಸಿದಂತೆ ಜನತೆಯಲ್ಲಿ ಜಾಗೃತಿ ಮೂಡಿಸುವುದು, ಪರಿಸರ ಸ್ನೇಹಿ ಅಭಿವೃದ್ಧಿಪಡಿಸಲು ಅಭಿಯಾನ ಆರಂಭಿಸುವುದು. ಗಿಡ, ಮರಗಳನ್ನು ಬೆಳೆಸುವಂತೆ ಜನರನ್ನು ಪ್ರೇರೆಪಿಸುವುದು ಈ ದಿನಗಳ ಪ್ರಮುಖ ಕಾರ್ಯಕ್ರಮಗಳಾಗಿವೆ.
ವಿಪರೀತ ತಾಪಮಾನಗಳು, ಅಸಹಜ ಪ್ರಾಕೃತಿಕ ವಿಕೋಪಗಳು ಮತ್ತು ವಿಪತ್ತುಗಳು ಇಂದು ಮನುಷ್ಯ ಎದುರಿಸುತ್ತಿರುವ ಸಾಮಾನ್ಯ ತೊಂದರೆಗಳಾಗಿ. ಭೂಮಿಯನ್ನು ಸರಿಪಡಿಸಲಾಗದಂತೆ ನಾವೆಷ್ಟು ಹಾನಿಯನ್ನು ಮಾಡಿದ್ದೇವೆ ಎಂಬುದನ್ನು ಈ ವಿಕೋಪಗಳು ಪ್ರತಿದಿನ ನಮಗೆ ನೆನಪಿಸಿಕೊಡುತ್ತಿವೆ. ಭೂಮಿಯನ್ನು ಸಂರಕ್ಷಣೆ ಮಾಡಲು ವಿಶ್ವ ಪರಿಸರ ದಿನವು ನಮಗೆಲ್ಲರಿಗೂ ಭರವಸೆ ಮತ್ತು ಅವಕಾಶವನ್ನು ಒದಗಿಸುತ್ತದೆ. ಪರಿಸರ ಮತ್ತು ಭೂಮಿಯ ಯೋಗಕ್ಷೇಮ ನಮ್ಮೆಲ್ಲರ ಆದ್ಯ ಕರ್ತವ್ಯ ಎಂಬುದನ್ನು ಈ ದಿನ ತಿಳಿಸಿಕೊಡುತ್ತದೆ.
ಏಕ ಬಳಕೆಯ ಪ್ಲಾಸ್ಟಿಕ್ ಮಾನವನ ಆರೋಗ್ಯ ಮತ್ತು ಜೀವವೈವಿಧ್ಯತೆಗೆ ಹಾನಿ ಮಾಡುತ್ತದೆ ಮತ್ತು ಪರಿಸರ ವ್ಯವಸ್ಥೆಯನ್ನು ಕಲುಷಿತಗೊಳಿಸುತ್ತದೆ. ಈ ಸಮಸ್ಯೆಯನ್ನು ನಿಭಾಯಿಸಲು ಲಭ್ಯವಿರುವ ವಿಜ್ಞಾನ ಮತ್ತು ಪರಿಹಾರಗಳೊಂದಿಗೆ, ಸರ್ಕಾರಗಳು, ಕಂಪನಿಗಳು ಮತ್ತು ಇತರ ಮಧ್ಯಸ್ಥಗಾರರು ಬಿಕ್ಕಟ್ಟನ್ನು ಪರಿಹರಿಸಲು ಕ್ರಮಗಳನ್ನು ಕೈಗೊಳಲು ಈ ವರ್ಷದ ಪರಿಸರ ದಿನ ಉತ್ತೇಜಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.