ಲಕ್ನೋ: 32 ವರ್ಷ ಹಳೆಯ ಅವಧೇಶ್ ರಾಯ್ ಹತ್ಯೆ ಪ್ರಕರಣದಲ್ಲಿ ಮಾಫಿಯಾ ಡಾನ್ ಹಾಗೂ ಯುಪಿಎ ಮಾಜಿ ಶಾಸಕ ಮುಖ್ತಾರ್ ಅನ್ಸಾರಿ ದೋಷಿ ಎಂದು ಇಂದು ವಾರಣಾಸಿಯ ಸಂಸದರು/ ಶಾಸಕರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಪಿನ ಮುನ್ನ ನ್ಯಾಯಾಲಯದ ಆವರಣದ ಹೊರಗೆ ಮತ್ತು ವಾರಣಾಸಿಯ ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿತ್ತು.
ಆಗಸ್ಟ್ 3, 1991 ರಂದು, ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ಅಜಯ್ ರಾಯ್ ಅವರ ಸಹೋದರ ಅವಧೇಶ್ ರೈ ಮೇಲೆ ಗುಂಡು ಹಾರಿಸಿ ಅವಧೇಶ್ ಅವರನ್ನು ಹತ್ಯೆ ಮಾಡಲಾಗಿತ್ತು.
ಮೇ 17 ರಂದು, ಘಾಜಿಪುರ ಸಂಸದ/ಶಾಸಕ ನ್ಯಾಯಾಲಯವು ಜಿಲ್ಲೆಯ ಉತ್ತರ ಪ್ರದೇಶದ ಮೊಹಮ್ಮದಾಬಾದ್ ಪ್ರದೇಶದಲ್ಲಿ ಕೊಲೆ ಯತ್ನಕ್ಕೆ ಸಂಚು ರೂಪಿಸಿದ ಪ್ರಕರಣದಲ್ಲಿ ಆರೋಪಿ ಮುಕ್ತಾರ್ ಅನ್ಸಾರಿಯನ್ನು ಖುಲಾಸೆಗೊಳಿಸಿತ್ತು. ದರೋಡೆಕೋರ-ರಾಜಕಾರಣಿಯಾಗಿರುವ ಅನ್ಸಾರಿ ಮೌ ಸದರ್ ವಿಧಾನಸಭಾ ಸ್ಥಾನದಿಂದ ಸತತ ಐದು ಅವಧಿಗೆ ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ (SBSP) ಪಕ್ಷದಿಂದ ಶಾಸಕನಾಗಿ ಆಯ್ಕೆಯಾಗಿದ್ದ. ಕಳೆದ ವರ್ಷ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಈತ ಸ್ಪರ್ಧಿಸಿಲ್ಲ ಆದರೆ ಈತನ ಸ್ಥಾನದಿಂದ ಇವನ ಮಗ ಅಬ್ಬಾಸ್ ಅನ್ಸಾರಿ ಗೆದ್ದು ಬಂದಿದ್ದಾನೆ.
ಮುಖ್ತಾರ್ ಅನ್ಸಾರಿ ಮತ್ತೊಂದು ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಯನ್ನು ಅನುಭವಿಸುತ್ತಿದ್ದಾನೆ. ಈ ವರ್ಷದ ಏಪ್ರಿಲ್ನಲ್ಲಿ, ಉತ್ತರ ಪ್ರದೇಶದ ಘಾಜಿಪುರದ ಸಂಸದ/ಶಾಸಕ ನ್ಯಾಯಾಲಯವು 2005ರ ಬಿಜೆಪಿ ಶಾಸಕ ಕೃಷ್ಣಾನಂದ್ ರಾಯ್ ಅವರ ಅಪಹರಣ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈತನಿಗೆ ಶಿಕ್ಷೆ ವಿಧಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.