ನವದೆಹಲಿ: ಭಾರತೀಯ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್ ಅವರು ಡಬ್ಲ್ಯುಎಫ್ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಒಂದು ತಿಂಗಳ ಕಾಲ ಪ್ರತಿಭಟನೆ ನಡೆಸಿದ ನಂತರ ಇದೀಗ ಭಾರತೀಯ ರೈಲ್ವೆಯಲ್ಲಿ ತಮ್ಮ ಕರ್ತವ್ಯವನ್ನು ಪುನರಾರಂಭಿಸಲು ನಿರ್ಧರಿಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಂತರ ಪ್ರತಿಭಟನಾ ನಿರತ ಕುಸ್ತಿಪಟುಗಳು ರೈಲ್ವೆಯಲ್ಲಿ ತಮ್ಮ ಸೇವೆಗಳನ್ನು ಪುನರಾರಂಭಿಸಿದ್ದಾರೆ
. ಸಿಂಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕುಸ್ತಿಪಟುಗಳು ಒಂದು ತಿಂಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸುತ್ತಿದ್ದರು, ಶನಿವಾರ ತಡರಾತ್ರಿ ಇವರು ಅಮಿತ್ ಶಾ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಆ ಬಳಿಕ ಪ್ರತಿಭಟನೆ ತೊರೆದು ಕರ್ತವ್ಯಕ್ಕೆ ಮರಳುವ ನಿರ್ಧಾರ ತೆಗೆದುಕೊಂಡಿದ್ದಾರೆ. ಆದರೆ ಪ್ರತಿಭಟನೆ ಮುಂದುವರೆಸುವುದಾಗಿ ಸ್ಪಷ್ಟಪಡಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಾನೂನಿನ ಅನ್ವಯ ಕ್ರಮಕೈಗೊಳ್ಳುತ್ತೇವೆ ಮತ್ತು ಬಿಜೆಪಿ ಸಂಸದ ಎಂಬ ಕಾರಣಕ್ಕೆ ಬ್ರಿಜ್ ಭೂಷಣ್ಗೆ ಯಾವುದೇ ವಿನಾಯಿತಿ ನೀಡುವುದಿಲ್ಲ ಎಂಬ ಭರವಸೆಯನ್ನು ಶಾ ಕುಸ್ತಿಪಟಗಳಿಗೆ ನೀಡಿದ್ದಾರೆ ಎನ್ನಲಾಗಿದೆ.
ಕುಸ್ತಿಪಟುಗಳ ಪ್ರತಿಭಟನೆಯಿಂದ ಹಿಂದೆ ಸರಿಯುವ ವರದಿಗಳನ್ನು ಸಾಕ್ಷಿ ಮಲಿಕ್ ಮತ್ತು ಬಜರಂಗ್ ಪುನಿಯಾ ನಿರಾಕರಿಸಿದ್ದಾರೆ. ಸಾಕ್ಷಿ ಮತ್ತು ಬಜರಂಗ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ನ್ಯಾಯ ಸಿಗುವವರೆಗೂ ಹಿಂದೆ ಸರಿಯುವುದಿಲ್ಲ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.