ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧಭಾರತದ ಉನ್ನತ ಕುಸ್ತಿಪಟುಗಳ ಪ್ರತಿಭಟನೆಯ ನಂತರ ಅವರ ವಿರುದ್ಧದ ತನಿಖೆ ಚುರುಕುಗೊಂಡಿದೆ.
ದೆಹಲಿ ಪೊಲೀಸ್ ಅಧಿಕಾರಿಗಳ ತಂಡ ಸೋಮವಾರ ಉತ್ತರ ಪ್ರದೇಶದ ಗೊಂಡಾದಲ್ಲಿರುವ ಬ್ರಿಜ್ ಭೂಷಣ್ ಶರಣ್ ಸಿಂಗ್ ನಿವಾಸಕ್ಕೆ ಭೇಟಿ ನೀಡಿದೆ. ಮೂಲಗಳ ಪ್ರಕಾರ, 10 ಸದಸ್ಯರ ದೆಹಲಿ ಪೊಲೀಸ್ ವಿಶೇಷ ತನಿಖಾ ತಂಡವು ಸಿಂಗ್ ನಿವಾಸವನ್ನು ತಲುಪಿದೆ ಮತ್ತು ತನಿಖೆಯ ಭಾಗವಾಗಿ ಕೆಲವು ನಿರ್ಣಾಯಕ ದಾಖಲೆಗಳನ್ನು ಸಂಗ್ರಹಿಸಿದೆ. ಡಬ್ಲ್ಯುಎಫ್ಐ ಮುಖ್ಯಸ್ಥನ ಕುಟುಂಬ ಸದಸ್ಯರು, ಮನೆಯ ಸಹಾಯಕರು ಮತ್ತು ಸಂಬಂಧಿಕರನ್ನೂ ಸಹ ವಿಚಾರಣೆಗೆ ಒಳಪಡಿಸಲಾಗಿದೆ.
ಸಿಂಗ್ ವಿರುದ್ಧ ಲೈಂಗಿಕ ಕಿರುಕುಳದ ಆರೋಪಕ್ಕೆ ಸಂಬಂಧಿಸಿದಂತೆ ಅಕಾಡೆಮಿಯ ತರಬೇತುದಾರರ ಹೇಳಿಕೆಗಳನ್ನು ದಾಖಲಿಸಿಕೊಂಡ ಪೊಲೀಸ್ ತಂಡವು ನಂದಿನಿ ನಗರ ಮಹಾವಿದ್ಯಾಲಯ ರಾಷ್ಟ್ರೀಯ ಅಕಾಡೆಮಿಯಲ್ಲಿ ತನಿಖೆ ನಡೆಸಿದೆ. ಕುಸ್ತಿಪಟುಗಳ ಲೈಂಗಿಕ ಕಿರುಕುಳ ಆರೋಪದ ಆಧಾರದ ಮೇಲೆ ದೆಹಲಿ ಪೊಲೀಸರು ಬ್ರಿಜ್ ಭೂಷಣ್ ವಿರುದ್ಧ ಎರಡು ಎಫ್ಐಆರ್ ಮತ್ತು 10 ದೂರುಗಳನ್ನು ದಾಖಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.