ನವದೆಹಲಿ: ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳನ್ನು ಚರ್ಚೆಗೆ ಬರುವಂತೆ ಕೇಂದ್ರ ಕ್ರೀಡಾ ಸಚಿವ ಅನುರಾಗ್ ಸಿಂಗ್ ಠಾಕೂರ್ ಅವರು ಆಹ್ವಾನ ನೀಡಿದ್ದಾರೆ.
ಟ್ವೀಟ್ ಮೂಲಕ ಅವರು, ಬೇಡಿಕೆಗಳ ಕುರಿತು ಚರ್ಚೆಗೆ ಬರುವಂತೆ ಪ್ರತಿಭಟನಾ ನಿರತ ಕುಸ್ತಿಪಟುಗಳನ್ನು ಆಹ್ವಾನಿಸಿದ್ದಾರೆ.
“ಸರ್ಕಾರವು ಕುಸ್ತಿಪಟುಗಳೊಂದಿಗೆ ಅವರ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲು ಸಿದ್ಧವಾಗಿದೆ. ನಾನು ಮತ್ತೊಮ್ಮೆ ಕುಸ್ತಿಪಟುಗಳನ್ನು ಅದಕ್ಕಾಗಿ ಆಹ್ವಾನಿಸಿದ್ದೇನೆ” ಎಂದು ಠಾಕೂರ್ ಹೇಳಿದ್ದಾರೆ.
ಕುಸ್ತಿಪಟುಗಳ ನಿಯೋಗವು ಗೃಹ ಸಚಿವ ಅಮಿತ್ ಶಾ ಅವರನ್ನು ಅವರ ಅಧಿಕೃತ ನಿವಾಸದಲ್ಲಿ ಭೇಟಿ ಮಾಡಿ, ಲೈಂಗಿಕ ಕಿರುಕುಳ ಆರೋಪಗಳ ಕುರಿತು ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಬಲವಾದ ಚಾರ್ಜ್ಶೀಟ್ ಅನ್ನು ಹಾಕುವಂತಯೆ ಒತ್ತಾಯಿಸಿದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ.
ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಮತ್ತು ಹಲವಾರು ತರಬೇತುದಾರರು ಶಾ ಜೊತೆಗಿನ ಸಭೆಯಲ್ಲಿ ಭಾಗವಹಿಸಿದ್ದರು ಎಂದು ಹೇಳಲಾಗಿದೆ, ಕಳೆದ ಶನಿವಾರ ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆಯಿತು ಎನ್ನಲಾಗಿದೆ.
The government is willing to have a discussion with the wrestlers on their issues.
I have once again invited the wrestlers for the same.
— Anurag Thakur (@ianuragthakur) June 6, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.