ನವದೆಹಲಿ: ದೇಶದಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು 2000 ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ (PACS) ಅವಕಾಶ ನೀಡಲು ಕೇಂದ್ರವು ನಿರ್ಧರಿಸಿದೆ. ಕೇಂದ್ರ ಗೃಹ ಸಚಿವ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ ಮನ್ಸುಖ್ ಮಾಂಡವಿಯಾ ಅವರೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಕೇಂದ್ರದ ಹೇಳಿಕೆಯ ಪ್ರಕಾರ, ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು ದೇಶಾದ್ಯಂತ 2000 PACS ಗಳನ್ನು ಗುರುತಿಸಲಾಗುತ್ತದೆ. ಮೊದಲ 1000 ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ಆಗಸ್ಟ್ 2023 ರ ವೇಳೆಗೆ ಮತ್ತು ಇನ್ನೊಂದು 1000 ಕೇಂದ್ರಗಳನ್ನು ಈ ವರ್ಷದ ಡಿಸೆಂಬರ್ನಲ್ಲಿ ತೆರೆಯಲಾಗುತ್ತಿದೆ.
ದೇಶದಾದ್ಯಂತ ಅತ್ಯಂತ ದುಬಾರಿ ಔಷಧಗಳನ್ನು ಅಗ್ಗದ ದರದಲ್ಲಿ ಲಭ್ಯವಾಗುವಂತೆ ಮಾಡುವುದು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ದೇಶಾದ್ಯಂತ ಪ್ರಧಾನ ಮಂತ್ರಿ ಭಾರತೀಯ ಜನೌಷಧಿ ಕೇಂದ್ರಗಳನ್ನು ತೆರೆಯಲು ಎರಡು ಸಾವಿರ ಪ್ರಾಥಮಿಕ ಕೃಷಿ ಸಾಲ ಸಂಘಗಳಿಗೆ ಪಿಎಸಿಎಸ್ಗೆ ಅವಕಾಶ ನೀಡುವ ಕುರಿತು ಗೃಹ ಸಚಿವ ಅಮಿತ್ ಶಾ ಮಾಡಿದ ಟ್ವೀಟ್ಗೆ ಉತ್ತರಿಸಿದ ಮೋದಿ, ಸಹಕಾರಿ ಕ್ಷೇತ್ರದ ಈ ಪ್ರಮುಖ ಉಪಕ್ರಮವು ಗ್ರಾಮೀಣ ಪ್ರದೇಶಗಳಲ್ಲಿ ವಾಸಿಸುವ ಜನರ ಜೀವನವನ್ನು ಸುಲಭಗೊಳಿಸುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.