ಕೊಲ್ಹಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಅನ್ನು ವೈಭವೀಕರಿಸಿ ಮಾಡಲಾದ ವಿವಾದಾತ್ಮಕ ಸಾಮಾಜಿಕ ಮಾಧ್ಯಮ ಪೋಸ್ಟ್ಗಳ ವಿರುದ್ಧ ಕೆಲವು ಹಿಂದೂ ಸಂಘಟನೆಗಳು ಇಂದು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬೃಹತ್ ಪ್ರತಿಭಟನೆಯನ್ನು ನಡೆಸಿವೆ.
ಬಂದ್ಗೆ ಕರೆ ನೀಡಿದ್ದ ಸಂಘಟನೆಗಳು, ಈ ಇಬ್ಬರು ಆಡಳಿತಗಾರರನ್ನು ವೈಭವೀಕರಿಸುವ ಉದ್ದೇಶವನ್ನು ಸೋಶಿಯಲ್ ಮೀಡಿಯಾ ಪೋಸ್ಟ್ ಹೊಂದಿವೆ ಎಂದು ಆರೋಪಿಸಿವೆ. ಕೋಲ್ಹಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕ್ನಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳನ್ನು ಧ್ವಂಸಗೊಳಿಸಿದ ಬಳಿಕ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು, ಪೋಸ್ಟ್ ಮಾಡಿದ ವ್ಯಕ್ತಿಗಳ ವಿರುದ್ಧ ಕ್ರಮಕ್ಕೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ತಿಳಿಸಿದ್ದಾರೆ. ಅಲ್ಲದೆ ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಿದರು.
‘ತನಿಖೆ ನಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಹೇಳಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಬೇಕಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಟ್ಟಣದ ಇತರೆಡೆಯಿಂದಲೂ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಬಗ್ಗೆ ವರದಿಯಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.