ನವದೆಹಲಿ: ಆಹ್ವಾನ ದೊರೆತ ಹಿನ್ನೆಲೆಯಲ್ಲಿ ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ ಮತ್ತು ಸಾಕ್ಷಿ ಮಲಿಕ್ ಇಂದು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರನ್ನು ಭೇಟಿಯಾಗಿ ಮಹತ್ವದ ಮಾತುಕತೆಗಳನ್ನು ನಡೆಸಿದ್ದಾರೆ.
ಈ ವೇಳೆ ಕುಸ್ತಿಪಟುಗಳು ಮಹಿಳಾ ಡಬ್ಲ್ಯುಎಫ್ಐ ಮುಖ್ಯಸ್ಥರ ನೇಮಕ ಮತ್ತು ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸುವುದು ಸೇರಿದಂತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಅವರ ಮುಂದೆ ಐದು ಬೇಡಿಕೆಗಳನ್ನು ಇಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭಾರತೀಯ ಕುಸ್ತಿ ಫೆಡರೇಶನ್ (WFI) ಗೆ ಮಹಿಳೆಯೊಬ್ಬರು ಮುಖ್ಯಸ್ಥರಾಗಿರಬೇಕು, ಫೆಡರೇಶನ್ಗೆ ಮುಕ್ತ ಮತ್ತು ನ್ಯಾಯಯುತ ಚುನಾವಣೆಗಳು ನಡೆಯಬೇಕು, ಮಾಜಿ WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ಅಥವಾ ಅವರ ಕುಟುಂಬ ಸದಸ್ಯರು WFI ನ ಭಾಗವಾಗಿರಬಾರದು, ಕಳೆದ ತಿಂಗಳು ಭಾರತದ ಹೊಸ ಸಂಸತ್ತಿನ ಕಟ್ಟಡವನ್ನು ಉದ್ಘಾಟಿಸಿದ ದಿನದಂದು ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಯ ಸಂಬಂಧ ತಮ್ಮ ವಿರುದ್ಧದ ಪೊಲೀಸ್ ಎಫ್ಐಆರ್ಗಳನ್ನು ರದ್ದುಗೊಳಿಸಬೇಕು, ಬ್ರಿಜ್ ಭೂಷಣ್ ಸಿಂಗ್ ಬಂಧನ ಮಾಡಬೇಕು ಎಂಬ ಬೇಡಿಕೆಯನ್ನು ಕುಸ್ತಿಪಟುಗಳು ಇಟ್ಟಿದ್ದಾರೆ ಎನ್ನಲಾಗಿದೆ.
ಕಳೆದ ಶನಿವಾರ ಕುಸ್ತಿಪಟುಗಳು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದರು, ಈ ಭೇಟಿಯ ವಿವರಗಳನ್ನು ಬಹಿರಂಗಪಡಿಸಲಾಗಿಲ್ಲ. ಇದೀಗ ಪ್ರತಿಭಟನಾನಿರತ ಕುಸ್ತಿಪಟುಗಳನ್ನು ಸರ್ಕಾರ ಎರಡನೇ ಬಾರಿಗೆ ಮಾತುಕತೆಗೆ ಆಹ್ವಾನಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.