ಬೆಂಗಳೂರು: ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗವನ್ನು ಭೇಟಿ ಮಾಡಿ ಮಾತನಾಡಿದರು.
ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಅಗತ್ಯವಿರುವ ದತ್ತಾಂಶ ಲಭ್ಯವಾಗುವುದು. ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದರು.
ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.