ಒಟ್ಟೋವಾ: ಖಲಿಸ್ತಾನಿ ಬೆಂಬಲಿಗರು ಮತ್ತೊಮ್ಮೆ ಕೆನಡಾದಲ್ಲಿ ಅಟ್ಟಹಾಸ ಮೆರೆದಿದ್ದಾರೆ. ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಹತ್ಯೆಗೆ ಸಂಬಂಧಿಸಿದ ಸ್ತಬ್ಧಚಿತ್ರವನ್ನು ಮೆರವಣಿಗೆ ಮಾಡಿ ಸಂಭ್ರಮಿಸಿದ್ದಾರೆ. ಈ ಸಂಬಂಧದ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಕೆನಡಾದ ಬ್ರಾಂಪ್ಟನ್ ನಗರದಲ್ಲಿ ವಿವಾದಿತ ಸ್ತಬ್ಧಚಿತ್ರ ಮೆರವಣಿಗೆ ಮಾಡಲಾಗಿದೆ. 1984 ಅಕ್ಟೋಬರ್ 31 ರಂದು ಇಂದಿರಾ ಗಾಂಧಿ ಅವರನ್ನು ಹತ್ಯೆ ಮಾಡಲಾಗಿತ್ತು. ಪ್ರಧಾನಿಯ ಭದ್ರತಾ ಸಿಬ್ಬಂದಿಗಳೇ ಹತ್ಯೆ ಮಾಡಿದ್ದರು. ಆ ಸಂದರ್ಭವನ್ನು ಸ್ತಬ್ಧಚಿತ್ರದಲ್ಲಿ ಬಿಂಬಿಸಲಾಗಿತ್ತು. ಜೂ. 6 ರಂದು ‘ಆಪರೇಷನ್ ಬ್ಲೂ ಸ್ಟಾರ್’ ಆಚರಣೆಗೂ ಮೊದಲು ಜೂ.4 ರಂದು ಖಲಿಸ್ತಾನಿ ಬೆಂಬಲಿಗರು ಪರೇಡ್ ಆಯೋಜಿಸಿದ್ದರು. ಈ ವೇಳೆ ಇಂದಿರಾ ಗಾಂಧಿ ಹತ್ಯೆಯ ಸ್ತಬ್ಧಚಿತ್ರದಲ್ಲಿ “ಶ್ರೀ ದರ್ಬಾರ್ ಸಾಹಿಬ್ ಮೇಲಿನ ದಾಳಿಗೆ ಪ್ರತೀಕಾರ” ಎಂದು ಹೇಳುವ ಫಲಕ ಅಳವಡಿಸಲಾಗಿದೆ.
ಸ್ತಬ್ಧಚಿತ್ರ ಮೆರವಣಿಗೆಗೆ ಕೆನಡಾದಲ್ಲಿನ ಭಾರತದ ಹೈಕಮಿಷನರ್ ಖಂಡನೆ ವ್ಯಕ್ತಪಡಿಸಿದೆ. ಅಲ್ಲದೇ ಕೆನಡಾದ ಬ್ರಾಂಪ್ಟನ್ ನಗರದಲ್ಲಿ ದಿವಂಗತ ಭಾರತದ ಪ್ರಧಾನಿ ಇಂದಿರಾ ಗಾಂಧಿಯವರ ಹತ್ಯೆಯ ಸಂಭ್ರಮಾಚರಣೆಯ ವರದಿಗಳನ್ನು ಭಾರತದಲ್ಲಿ ಕೆನಡಾದ ಹೈಕಮಿಷನರ್ ಕ್ಯಾಮರೂನ್ ಮ್ಯಾಕೆ ಖಂಡಿಸಿದ್ದಾರೆ. “ಕೆನಡಾದಲ್ಲಿ ದ್ವೇಷ ಅಥವಾ ಹಿಂಸಾಚಾರವನ್ನು ವೈಭವೀಕರಿಸುವುದಕ್ಕೆ ಅವಕಾಶ ಇಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.
I am appalled by reports of an event in Canada that celebrated the assassination of late Indian Prime Minister Indira Gandhi. There is no place in Canada for hate or for the glorification of violence. I categorically condemn these activities.
— Cameron MacKay (@HCCanInd) June 7, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.