ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಸೌದಿ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಅವರು ನಿನ್ನೆ ದ್ವಿಪಕ್ಷೀಯ ಸಹಕಾರವನ್ನು ಪರಿಶೀಲಿಸಿದರು ಮತ್ತು ಸಂಪರ್ಕ, ಶಕ್ತಿ ಮತ್ತು ರಕ್ಷಣೆಯಲ್ಲಿ ಸಂಬಂಧಗಳನ್ನು ಹೆಚ್ಚಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ಪ್ರಧಾನಿ ಮೋದಿ ಅವರು ಸೌದಿ ಅರೇಬಿಯಾದ ಯುವರಾಜ ಮೊಹಮ್ಮದ್ ಬಿನ್ ಸಲ್ಮಾನ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರೊಂದಿಗೆ ನಿನ್ನೆ ದೂರವಾಣಿ ಸಂಭಾಷಣೆ ನಡೆಸಿದರು. ನಾಯಕರು ದ್ವಿಪಕ್ಷೀಯ ಸಹಕಾರದ ಹಲವಾರು ವಿಷಯಗಳನ್ನು ಪರಿಶೀಲಿಸಿದರು ಮತ್ತು ಪರಸ್ಪರ ಆಸಕ್ತಿಯ ವಿವಿಧ ಬಹುಪಕ್ಷೀಯ ಮತ್ತು ಜಾಗತಿಕ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.
ಈ ವರ್ಷದ ಏಪ್ರಿಲ್ನಲ್ಲಿ ಸುಡಾನ್ನಿಂದ ಜೆದ್ದಾ ಮೂಲಕ ಭಾರತೀಯ ಪ್ರಜೆಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ಸೌದಿ ಅರೇಬಿಯಾ ನೀಡಿದ ಅತ್ಯುತ್ತಮ ಬೆಂಬಲಕ್ಕಾಗಿ ಮೋದಿ ಅವರು ಮೊಹಮ್ಮದ್ ಬಿನ್ ಸಲ್ಮಾನ್ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಮುಂಬರುವ ಹಜ್ ಯಾತ್ರೆಗೆ ಅವರು ಶುಭ ಹಾರೈಸಿದರು. ಮೊಹಮ್ಮದ್ ಬಿನ್ ಸಲ್ಮಾನ್ ಅವರು G20 ಪ್ರೆಸಿಡೆನ್ಸಿಯ ಭಾಗವಾಗಿ ಭಾರತದ ಉಪಕ್ರಮಗಳಿಗೆ ತಮ್ಮ ಸಂಪೂರ್ಣ ಬೆಂಬಲವನ್ನು ತಿಳಿಸಿದ್ದಾರೆ ಮತ್ತು ಅವರು ಭಾರತಕ್ಕೆ ಭೇಟಿ ನೀಡಲು ಎದುರು ನೋಡುತ್ತಿದ್ದಾರೆ ಎನ್ನಲಾಗಿದೆ.
Spoke to Saudi Arabia's Crown Prince & PM HRH Prince Mohammed bin Salman. Discussed boosting ties in connectivity, energy, defense, trade & investment, and exchanged views on regional and global issues. Appreciated his support in safe evacuation of Indians from Sudan and for Haj.
— Narendra Modi (@narendramodi) June 8, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.