ವಾರಣಾಸಿ: ಭಾರತದ ಆಧ್ಯಾತ್ಮಿಕತೆಯ ಪ್ರಮುಖ ಕ್ಷೇತ್ರ ವಾರಣಾಸಿಯಲ್ಲಿ ಜಿ-20 ಸದಸ್ಯ ರಾಷ್ಟ್ರಗಳ ಅಭಿವೃದ್ಧಿ ಸಚಿವರ ಸಭೆ ನಿನ್ನೆಯಿಂದ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಈ ಸಭೆಯನ್ನುದ್ದೇಶಿ ವಿಡಿಯೋ ಸಂದೇಶ ನೀಡಿದರು.
ಸಭೆ ಉದ್ದೇಶಿಸಿ ಮಾತನಾಡಿದ ಮೋದಿ, ಅಭಿವೃದ್ಧಿಯನ್ನು ಸುಸ್ಥಿರಗೊಳಿಸುವುದು ಸಾಮೂಹಿಕ ಜವಾಬ್ದಾರಿಯಾಗಿದೆ, ಭಾರತ ತನ್ನ ಅನುಭವವನ್ನು ಹಂಚಿಕೊಳ್ಳಲು ಸಿದ್ಧವಾಗಿದೆ, ಪರಿಸರದ ಬಗ್ಗೆ ಗಮನ ಹರಿಸುವುದು ಬಹಳ ಮುಖ್ಯ, ನಾವು ನದಿ, ಮರಗಳನ್ನು ಗೌರವಿಸುತ್ತೇವೆ, ನಮ್ಮ ಪ್ರಯತ್ನಗಳು ವ್ಯಾಪಕ, ನ್ಯಾಯಯುತ ಮತ್ತು ಸುಸ್ಥಿರವಾಗಿರಬೇಕು ಎಂದರು.
ಅಲ್ಲದೇ ಭಾರತದಲ್ಲಿ ನಾವು ಅಭಿವೃದ್ಧಿ ಹೊಂದದ 100 ಕ್ಕೂ ಹೆಚ್ಚು ಜಿಲ್ಲೆಗಳ ಜನರ ಜೀವನವನ್ನು ಸುಧಾರಿಸಲು ಪ್ರಯತ್ನಿಸಿದ್ದೇವೆ, ಈ ಪ್ರಯತ್ನಗಳು ಅನೇಕರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಯನ್ನುತಂದಿದೆ. ಜಿ-20 ರ ಅಭಿವೃದ್ಧಿ ಕಾರ್ಯಸೂಚಿಯೂ ಕಾಶಿಯನ್ನು ತಲುಪಿರುವುದು ನನಗೆ ಸಂತೋಷವಾಗಿದೆ ಎಂದು ಹೇಳಿದರು.
ಕಾಶಿ ಶತಮಾನಗಳಿಂದ ಜ್ಞಾನ, ಚರ್ಚೆ, ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಕೇಂದ್ರವಾಗಿದೆ. ಇದು ಭಾರತದ ವೈವಿಧ್ಯಮಯ ಪರಂಪರೆಯ ಸಾರವನ್ನು ಹೊಂದಿದೆ ಮತ್ತು ದೇಶದ ಎಲ್ಲಾ ಭಾಗಗಳ ಜನರಿಗೆ ಟ್ರಾನ್ಸ್ಶಿಪ್ಮೆಂಟ್ ಪಾಯಿಂಟ್ನಂತೆ ಕಾರ್ಯನಿರ್ವಹಿಸುತ್ತದೆ. ಡಿಜಿಟಲೀಕರಣವು ಭಾರತದಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದೆ ಎಂದರು.
#WATCH | I am delighted that the G20 development agenda has reached Kashi as well. Development is a core issue for the global south…I strongly believe that it is our collective responsibility not to let the sustainable development goals fall behind. We must ensure that no one… pic.twitter.com/8qQdSAVdmP
— ANI (@ANI) June 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.