ಬೆಂಗಳೂರು: ಅತಿಥಿಗಳಿಗೆ ಗೌರವಪೂರ್ಣ ಸ್ಥಾನ ನೀಡಿರುವ ಭಾರತದಲ್ಲಿ ಕೆಲವರು ತಮ್ಮ ಪೈಶಾಚಿಕತೆ ಪ್ರದರ್ಶಿಸಿ ಭಾರತದ ಸಂಸ್ಕೃತಿಗೆ ಧಕ್ಕೆ ತರುತ್ತಿದ್ದಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಭಾರತದ ಪ್ರವಾಸಕ್ಕೆ ಬಂದಿರುವ ವಿದೇಶಿ ಪ್ರವಾಸಿಗನಿಗೆ ಕಿರುಕುಳ ನೀಡಿದ್ದ ಪುಂಡನನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ನವಾಬ್ ಹಯಾತ್ ಶರೀಫ್ ಬಂಧಿತ ಆರೋಪಿ. ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚಿ ಬಂಧಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿದ ಬೆಂಗಳೂರು ಪೊಲೀಸ್, ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದೇಶಿ ಪ್ರವಾಸಿಗರೊಂದಿಗೆ ಇಂತಹ ಅನುಚಿತ ವರ್ತನೆಯನ್ನು ಸಹಿಸುವುದಿಲ್ಲ ಎಂದು ಹೇಳಿದೆ.
ನೆದರ್ಲ್ಯಾಂಡ್ ಮೂಲದ ಮ್ಯಾಡ್ಲಿ ರೋವರ್ ಬೆಂಗಳೂರಿನ ಚಿಕ್ಕಪೇಟೆಯಲ್ಲಿ ವೀಡಿಯೋ ಮಾಡುತ್ತಾ ಸುತ್ತುತ್ತಿದ್ದರು. ಸಂಡೇ ಬಜಾರ್ನಲ್ಲಿ ಸೆಲ್ಫಿ ವಿಡಿಯೋ ಮಾಡುತ್ತಿದ್ದಾಗ ನವಾಬ್ ಹಯಾತ್ ಶರೀಫ್ ವಿಡಿಯೋ ಮಾಡದಂತೆ ಹಲ್ಲೆಗೆ ಯತ್ನಿಸಿದ್ದಾನೆ. ಈ ವಿಡಿಯೋ ವೈರಲ್ ಆಗಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು, ಈ ಹಿನ್ನೆಲೆಯಲ್ಲಿ ಪೊಲೀಸರು ದೂರು ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
It's been 21 hours now, since the video was uploaded. Vlogger has now edited his comment & clarified that incident is of March but he uploaded video only yesterday
After video went viral, today, Bengaluru police arrested accused man, Navab Hayath Sharif for harassing the vlogger pic.twitter.com/On2XcxCKVD
— Anshul Saxena (@AskAnshul) June 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.