ನವದೆಹಲಿ: ಯುನೈಟೆಡ್ ಕಿಂಗ್ಡಂ(ಯುಕೆ)ಯ ಲಂಡನ್ನಲ್ಲಿರುವ ಭಾರತೀಯ ಹೈಕಮಿಷನ್ಗೆ ದೇಶವಿರೋಧಿ ಅಂಶಗಳು ಇತ್ತೀಚಿಗೆ ಮುತ್ತಿಗೆ ಹಾಕಿದ ಘಟನೆ ನಡೆದಿತ್ತು. ಇದಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಕಟ್ಟಡವನ್ನು ವಿರೂಪಗೊಳಿಸುತ್ತಿರುವ ಎರಡು ಗಂಟೆಗಳ ಸಿಸಿಟಿವಿ ದೃಶ್ಯಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಿಡುಗಡೆ ಮಾಡಿದೆ.
ಸಾರ್ವಜನಿಕ ಹಿತಾಸಕ್ತಿಯಿಂದ ಸಿಸಿಟಿವಿ ದೃಶ್ಯಗಳಲ್ಲಿ ಕಂಡುಬರುವ ಜನರ ಬಗ್ಗೆ ಮಾಹಿತಿಯನ್ನು ಏಜೆನ್ಸಿಗೆ ನೀಡುವಂತೆ ಎನ್ಐಎ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಎನ್ಐಎ ದಾಳಿಯ ಸಿಸಿಟಿವಿ ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿದೆ ಮತ್ತು ವಿಧ್ವಂಸಕರ ಬಗ್ಗೆ ಮಾಹಿತಿಗಾಗಿ ವಾಟ್ಸಾಪ್ ಸಂಖ್ಯೆ 91 7290009373 ಅನ್ನು ನೀಡಿದೆ. ದುಷ್ಕರ್ಮಿಗಳ ಬಗ್ಗೆ ಮಾಹಿತಿ ಇದ್ದವರು ಈ ಸಂಖ್ಯೆಗೆ ಕಳುಹಿಸಬಹುದು. ಅಲ್ಲದೇ ಮಾಹಿತಿದಾರರ ಗುರುತನ್ನು ರಹಸ್ಯವಾಗಿಡುವುದಾಗಿ ತನಿಖಾ ಸಂಸ್ಥೆ ಭರವಸೆ ನೀಡಿದೆ.
REQUEST FOR INFORMATION
CCTV footage of the attack by anti-national elements on High Commission of India London.https://t.co/UG0aM5Ag7N pic.twitter.com/oZXpdlQR6L— NIA India (@NIA_India) June 12, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.