ನವದೆಹಲಿ: ನಗರ ಪ್ರದೇಶಗಳಲ್ಲಿನ ಪ್ರವಾಹ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ನಿಭಾಯಿಸಲು, ಅಗ್ನಿಶಾಮಕ ದಳದ ಸೇವೆಯನ್ನು ಬಲಪಡಿಸಲು ಮತ್ತು ಭೂಕುಸಿತ ತಗ್ಗಿಸಲು ಕೇಂದ್ರಸರ್ಕಾರವು ರಾಜ್ಯಗಳಿಗೆ 8,000 ಕೋಟಿ ರೂಪಾಯಿಗಳಿಗಿಂತ ಹೆಚ್ಚು ಹಣವನ್ನು ನೀಡಲಿದೆ ಎಂದು ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.
ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳ ವಿಪತ್ತು ನಿರ್ವಹಣೆಯ ಸಚಿವರೊಂದಿಗೆ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್ ಸೇರಿದಂತೆ ಏಳು ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ಮಹಾನಗರಗಳಲ್ಲಿ ಅಗ್ನಿಶಾಮಕ ಸೇವೆಗಳನ್ನು ವಿಸ್ತರಿಸಲು ಮತ್ತು ಆಧುನೀಕರಿಸಲು ರಾಜ್ಯಗಳಿಗೆ 5000 ಕೋಟಿರೂಪಾಯಿಗಳನ್ನು, ನಗರ ಪ್ರವಾಹದ ಅಪಾಯವನ್ನು ಕಡಿಮೆ ಮಾಡಲು 2,500 ಕೋಟಿರೂಪಾಯಿಗಳನ್ನು ನೀಡಲಾಗುವುದು ಎಂದರು.
ಭೂಕುಸಿತ ತಗ್ಗಿಸಲು 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ 825 ಕೋಟಿ ರೂಪಾಯಿಗಳನ್ನು ಒದಗಿಸಲಾಗುವುದು ಎಂದರು. ಸಭೆಯಲ್ಲಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಮತ್ತು ಗೃಹ ಸಚಿವಾಲಯ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.