
ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗಾಗಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಬುಧವಾರ ಬೆಳ್ಳಂಬೆಳಗ್ಗೆ ತಮಿಳುನಾಡು ಸಚಿವ ವಿ ಸೆಂಥಿಲ್ ಬಾಲಾಜಿಯನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ. ಡಿಎಂಕೆ ನೇತೃತ್ವದ ತಮಿಳುನಾಡು ಸರ್ಕಾರದಲ್ಲಿ ವಿದ್ಯುತ್, ನಿಷೇಧ ಮತ್ತು ಅಬಕಾರಿ ಸಚಿವರಾಗಿರುವ ವಿ ಸೆಂಥಿಲ್ ಬಾಲಾಜಿ ಅವರನ್ನು ಇಡಿ ಔಪಚಾರಿಕವಾಗಿ ಬಂಧಿಸಿದೆ.
ತನಿಖಾ ಸಂಸ್ಥೆ ಮಂಗಳವಾರ ಅವರ ನಿವಾಸದ ಮೇಲೆ ದಾಳಿ ನಡೆಸಿದ ನಂತರ ಅವರನ್ನು ವಿಚಾರಣೆಗೆ ಕರೆದೊಯ್ದಿದೆ. ಇದರ ಬೆನ್ನಲ್ಲೇ ಇಡಿ ಬುಧವಾರ ಬೆಳ್ಳಂಬೆಳಗ್ಗೆ ಬಿಗಿ ಭದ್ರತೆಯ ನಡುವೆ ಬಾಲಾಜಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಚೆನ್ನೈನ ಒಮಂದೂರಾರ್ ಸರ್ಕಾರಿ ಆಸ್ಪತ್ರೆಗೆ ಕರೆತಂದಿದೆ.
ಸೆಂಥಿಲ್ ಅವರನ್ನು ಆಸ್ಪತ್ರೆಗೆ ಕರೆತರುತ್ತಿದ್ದಂತೆಯೇ ಆಸ್ಪತ್ರೆಯ ಹೊರಗೆ ಭಾರೀ ನಾಟಕೀಯ ವಾತಾವರಣ ನಿರ್ಮಾಣವಾಗಿತ್ತು. ಇಡಿ ಕ್ರಮವನ್ನು ವಿರೋಧಿಸಿ ಅವರ ಬೆಂಬಲಿಗರು ಜಮಾಯಿಸಿದ್ದ ವೇಳೆ ಕಾರಿನಲ್ಲೇ ಸೆಂಥಿಲ್ ಮಲಗಿ ನೋವಿನಿಂದ ಅಳುತ್ತಾ ಚೀರಾಡಿದ ಘಟನೆ ನಡೆದಿದೆ.
ನಂತರ ಅವರನ್ನು ಐಸಿಯುಗೆ ಸ್ಥಳಾಂತರಿಸಲಾಗಿದೆ ಮತ್ತು ಬಾಲಾಜಿ ಬಂಧನವನ್ನು ಇಡಿ ಅಧಿಕೃತವಾಗಿ ಖಚಿತಪಡಿಸಿಲ್ಲ ಎಂದು ಡಿಎಂಕೆ ಸಂಸದ ಮತ್ತು ವಕೀಲ ಎನ್ಆರ್ ಎಲಾಂಗೋ ಹೇಳಿದ್ದಾರೆ. “ನಾನು ಸೆಂಥಿಲ್ ಬಾಲಾಜಿ ಅವರನ್ನಯ ಐಸಿಯುಗೆ ಸ್ಥಳಾಂತರಿಸಿದ್ದನ್ನು ನೋಡಿದೆ. ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಮೌಲ್ಯಮಾಪನ ಮಾಡುತ್ತಿದ್ದಾರೆ. ಅವರನ್ನು ಬಂಧಿಸಲಾಗಿದೆ ಎಂದು ಅಧಿಕೃತವಾಗಿ ನಮಗೆ ಇಡಿ ನಮಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.


