ಬೆಂಗಳೂರು: ಶಿಕ್ಷಣ ಕ್ಷೇತ್ರದ ವಿಧಾನಪರಿಷತ್ ಸದಸ್ಯರು ಮತ್ತು ಶಿಕ್ಷಣ ರಂಗದಲ್ಲಿ ಆಸಕ್ತಿ ಹೊಂದಿದ ಎಂಎಲ್ಎಗಳು, ಎಂಎಲ್ಸಿಗಳ ಸಭೆ ಕರೆದು ಪಠ್ಯಪುಸ್ತಕ ಪರಿಷ್ಕರಣೆಗೆ ನೂತನ ಸರಕಾರ ಮುಂದಾಗಿರುವ ಕುರಿತು ಚರ್ಚಿಸಲು ಬಿಜೆಪಿ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಯಿತು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ರಾಜ್ಯದ ನೂತನ ಕಾಂಗ್ರೆಸ್ ಸರಕಾರವು ಪಠ್ಯಪುಸ್ತಕ ಪರಿಷ್ಕರಣೆಗೆ ಮುಂದಾಗಿರುವುದರ ಬಗ್ಗೆ ಚರ್ಚಿಸಲಾಯಿತು. ಜುಲೈನಲ್ಲಿ ಅಧಿವೇಶನ ನಡೆಯಲಿದ್ದು, ಅದಕ್ಕೂ ಮೊದಲೇ ಈ ಸಭೆ ನಡೆಸಲು ತೀರ್ಮಾನಿಸಲಾಯಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿ.ಸಿ.ನಾಗೇಶ್, ಸುರೇಶ್ಕುಮಾರ್, ವಿಧಾನಪರಿಷತ್ ಸದಸ್ಯರಾದ ಶಶೀಲ್ ನಮೋಶಿ, ಅ.ದೇವೇಗೌಡ ಅವರು ಈ ಸಭೆಯಲ್ಲಿ ಭಾಗವಹಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.