ನ್ಯೂಯಾರ್ಕ್: ಪ್ರಧಾನಿ ನರೇಂದ್ರ ಮೋದಿಯವರ ಆಧ್ಯಾತ್ಮಿಕ ಗುರುಗಳಾಗಿದ್ದ ಸ್ವಾಮಿ ದಯಾನಂದ ಸರಸ್ವತಿ ಅವರು ಬುಧವಾರ ರಾತ್ರಿ ಹೃಷಿಕೇಶದ ತಮ್ಮ ಆಶ್ರಮದಲ್ಲಿ ಅಸ್ತಂಗತರಾಗಿದ್ದಾರೆ.
ಸುಧೀರ್ಘ ಸಮಯದಿಂದ ಅನಾರೋಗ್ಯ ಪೀಡಿತರಾಗಿದ್ದ ಅವರು, ಹಲವಾರು ದಿನಗಳಿಂದ ಜೋಲಿಗ್ರಂತ್ ಹಿಮಾಲಯನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಹತ್ತು ದಿನಗಳ ಹಿಂದೆಯಷ್ಟೇ ತಮ್ಮ ಆಶ್ರಮಕ್ಕೆ ವಾಪಾಸ್ ಬಂದಿದ್ದರು.
ತನ್ನ ಗುರುವಿನ ನಿಧನಕ್ಕೆ ಸಂತಾಪ ಸೂಚಿಸಿರುವ ಮೋದಿ, ಸ್ವಾಮಿ ದಯಾನಂದ ಸರಸ್ವತಿಯವರ ನಿಧನ ನನಗಾದ ವೈಯಕ್ತಿಕ ನಷ್ಟ. ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವಿಟ್ ಮಾಡಿದ್ದಾರೆ.
ಸೆ.11ರಂದು ಹೃಷಿಹೇಶಕ್ಕೆ ತೆರಳಿ ಮೋದಿ ತಮ್ಮ ಗುರುಗಳ ಯೋಗ ಕ್ಷೇಮ ವಿಚಾರಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.