ಬೆಂಗಳೂರು: ಅನ್ನಭಾಗ್ಯ ಯೋಜನೆ ಜಾರಿ ವಿಷಯದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕೇಂದ್ರದತ್ತ ಬೊಟ್ಟು ಮಾಡಿ ತೋರಿಸುತ್ತಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಸರಕಾರಕ್ಕೆ ಇಚ್ಛಾಶಕ್ತಿ ಕೊರತೆ ಇದೆ. ಹಣಕಾಸಿನ ವ್ಯವಸ್ಥೆ ಮಾಡಲು ಸಾಧ್ಯವಾಗದ ಕಾರಣ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ರಾಜಕಾರಣ ಮಾಡುತ್ತಿದೆ. ಕಾಂಗ್ರೆಸ್ ಸರಕಾರ 10 ಕೆಜಿ ಅಕ್ಕಿ ವಿಚಾರದಲ್ಲಿ ಮೋಸ ಮಾಡುತ್ತಿರುವುದು ಸ್ಪಷ್ಟಗೊಂಡಿದೆ. ಮಾತು ತಪ್ಪಿದ ದೋಖಾ ಕಾರ್ಯಕ್ರಮ ಮುಂದುವರಿಸಿದ್ದಾರೆ ಎಂದಿದ್ದಾರೆ.
ತಮ್ಮ ವಿಫಲತೆಯನ್ನು ಮುಚ್ಚಿ ಹಾಕಲು ರೈತರ, ಬಡವರ ಬಿಪಿಎಲ್ ಕಾರ್ಡ್ದಾರರ ಆಕ್ರೋಶದಿಂದ ಪಾರಾಗಲು ಅಕ್ಕಿ ಸರಬರಾಜು ವಿಚಾರದಲ್ಲಿ ಸಿದ್ದರಾಮಯ್ಯ ಸರ್ಕಾರ ರಾಜಕಾರಣ ಮಾಡುತ್ತಿದೆ ಎಂದರು.
ಕೇಂದ್ರ ಸರಕಾರವು ಆಹಾರ ಭದ್ರತಾ ಕಾಯ್ದೆ ಪ್ರಕಾರ ಎಲ್ಲ ರಾಜ್ಯಗಳಿಗೆ 5 ಕೆಜಿ ಅಕ್ಕಿ ಕೊಡುತ್ತಿದೆ. 10 ಕೆಜಿ ಪೈಕಿ 5 ಕೆಜಿ ಕೇಂದ್ರದ ನರೇಂದ್ರ ಮೋದಿ ಸರಕಾರವೇ ನೀಡುತ್ತಿದೆ ಎಂದಿದ್ದಾರೆ.
2 ವರ್ಷ ಕೇಂದ್ರ- ರಾಜ್ಯ ಸರಕಾರ ಸೇರಿ ಡಿಸೆಂಬರ್ ವರೆಗೆ 10 ಕೆಜಿ ಕೊಟ್ಟಿದ್ದೆವು ಎಂದ ಅವರು, ಕಾಂಗ್ರೆಸ್ ಸರಕಾರದ ಮೊದಲ ಸಂಪುಟ ಸಭೆಯಲ್ಲಿ ಈ ಸರಕಾರ ತಾತ್ವಿಕವಾಗಿ 5 ಗ್ಯಾರಂಟಿಗಳಿಗೆ ಮಂಜೂರಾತಿ ಕೊಡಲಾಗಿತ್ತು. ಸರಣಿ ಸಭೆಗಳನ್ನೂ ನಡೆಸಿದ್ದರು. ಟೆಂಡರ್ ಕರೆದು ಅಕ್ಕಿ ಪಡೆಯಬೇಕಿತ್ತಲ್ಲವೇ? ಕುಂಟು ನೆಪ ಹೇಳುವುದೇ ನಿಮ್ಮ ಕ್ರಮವಲ್ಲವೇ? ಎಂದು ಪ್ರಶ್ನಿಸಿದರು.
ಬಡವರಿಗೆ ಆಮಿಷಗಳನ್ನು ತೋರಿಸಿ, ಈಗ ಅಧಿಕಾರಕ್ಕೆ ಬಂದ ಮೇಲೆ ನೀಡಿದ ಗ್ಯಾರಂಟಿಗಳನ್ನು ಈಡೇರಿಸಲಾಗದೆ ಬೇರೆಯವರ ಮೇಲೆ ಆಪಾದನೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ 10 ಕೆ. ಜಿ. ಅಕ್ಕಿಯನ್ನು ನೀಡಲು ನೆಪ ಹೇಳುತ್ತಿದೆ.
ಇಚ್ಛಾಶಕ್ತಿ ಕೊರತೆ ಇರುವ ಕಾಂಗ್ರೆಸ್, ಜನರಿಗೆ ಕೊಟ್ಟ ಮಾತನ್ನು ಪೂರೈಸದೆ ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡುವುದು… pic.twitter.com/9kViulI0bo
— BJP Karnataka (@BJP4Karnataka) June 15, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.