ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ (WFI) ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಗುರುವಾರ 1,000 ಪುಟಗಳ ಆರೋಪಪಟ್ಟಿ ಸಲ್ಲಿಸಿದ್ದಾರೆ.
ರೋಸ್ ಅವೆನ್ಯೂ ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಕೆಯಾಗಿದ್ದು ಜುಲೈ 4 ರಂದು ವಿಚಾರಣೆ ನಡೆಯಲಿದೆ.
ಚಾರ್ಜ್ಶೀಟ್ ನಲ್ಲಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಫೋಕ್ಸೊ ಪ್ರಕರಣ ರದ್ದು ಮಾಡುವಂತೆ ಪೋಲೀಸರು ಶಿಫಾರಸ್ಸು ಮಾಡಿದ್ದಾರೆ. ಈ ಬಗ್ಗೆ 500 ಪುಟಗಳ ವರದಿ ನೀಡಿರುವ ಪೊಲೀಸರು ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವುದಕ್ಕೆ ಯಾವುದೇ ಸಾಕ್ಷ್ಯ – ಪುರಾವೆಗಳು ಲಭ್ಯವಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಕುಸ್ತಿಪಟುಗಳ ದೂರಿನ ಮೇರೆಗೆ ದಾಖಲಿಸಿದ FIR ಆಧರಿಸಿ ನಡೆಸಿದ ತನಿಖೆ ಬಳಿಕ ಆರೋಪಿ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಐಪಿಸಿ ಸೆಕ್ಷನ್ 354, 354 A, 354 D ಮತ್ತು IPC ಸೆಕ್ಷನ್ 109/ 354/354 A/506ರ ಅಡಿಯಲ್ಲಿ ಚಾರ್ಜ್ಶೀಟ್ ಸಲ್ಲಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.