ಪಣಜಿ: ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಪಠ್ಯ ಪರಿಷ್ಕರಣೆ ವಿಚಾರ ದೊಡ್ಡದಾಗಿ ಚರ್ಚೆಗೆ ಗ್ರಾಸವಾಗುತ್ತಿದೆ. ಈಗಾಗಲೇ ವೀರ ಸಾವರ್ಕರ್ ಅವರ ಪಠ್ಯವನ್ನು ಕೈಬಿಟ್ಟು ಜವಹಾರ್ಲಾಲ್ ಅವರ ಪಠ್ಯವನ್ನು ಸೇರಿಸಲು ಸಿದ್ಧತೆ ನಡೆದಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೀರ ಸಾವರ್ಕರ್ ಅವರ ಮೊಮ್ಮಗ ರಂಜಿತ್ ಸಾವರ್ಕರ್ ಅವರು, ಸಾವರ್ಕರ್ ಕುರಿತಾದ ವಿಚಾರಗಳನ್ನು ಪಠ್ಯಪುಸ್ತಕಗಳಿಂದ ಕೈಬಿಡುವ ಕಾಂಗ್ರೆಸ್ ಸರ್ಕಾರದ ನಿರ್ಧಾರದಿಂದ ವಿದ್ಯಾರ್ಥಿಗಳಿಗೆ ಕಲಿಯುವ ಅವಕಾಶದಿಂದ ವಂಚಿತರಾಗುತ್ತಾರೆ ಎಂದು ಹೇಳಿದ್ದಾರೆ.
ಗೋವಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾಜಿಕ ಜಾಲತಾಣಗಳಲ್ಲಿ ಸಾವರ್ಕರ್ ಅವರ ವಿಚಾರಗಳ ಮಾಹಿತಿ ಸಿಗುತ್ತದೆ. ಈಗಾಗಲೇ ಅವರ ಬರಹಗಳನ್ನು ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. ಮುಂದಿನ ದಿನಗಳಲ್ಲಿ ಆ ಬರಹಗಳನ್ನು ಕನ್ನಡದಲ್ಲೂ ಪ್ರಕಟಿಸಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಯಾವುದನ್ನು ತಡೆಯಲು ಬಯಸುತ್ತೇವೆಯೋ ಅದು ಮತ್ತಷ್ಟು ಪ್ರಬಲಗೊಳ್ಳುತ್ತದೆ. ಪ್ರತಿಯೊಂದು ಕ್ರಿಯೆಗೂ ಅದರ ಸಮಾನ ಮತ್ತು ವಿರುದ್ಧವಾದ ಪ್ರತಿಕ್ರಿಯೆ ಇದ್ದೇ ಇರುತ್ತದೆ ಎಂಬ ನ್ಯೂಟನ್ನ ಮೂರನೇ ನಿಯಮವನ್ನು ಅವರು ಉದಾಹರಣೆ ನೀಡಿದ್ದಾರೆ.
ವರದಿಗಳ ಪ್ರಕಾರ ಸಿದ್ದರಾಮಯ್ಯ ಸರ್ಕಾರ ಸಾವರ್ಕರ್ ಅವರ ಪಠ್ಯವನ್ನು ಕೈಬಿಟ್ಟು ನೆಹರೂ ಪಠ್ಯವನ್ನು ಸೇರಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.