ಮುಂಬಯಿ: ಆದಿಪುರುಷ್ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಚಿತ್ರ ನಿಷೇಧಿಸುವಂತೆ ಸಿನಿ ವರ್ಕರ್ಸ್ ಅಸೋಸಿಯೇಷನ್ ಪ್ರಧಾನಿ ನರೇಂದ್ರ ಮೋದಿಗೆ ಬಹಿರಂಗ ಪತ್ರ ಬರೆದಿದೆ.
ನಟ ಪ್ರಭಾಸ್ ಮತ್ತು ತಾನಾಜಿ ಖ್ಯಾತಿಯ ನಿರ್ದೇಶಕ ಓಂ ರಾವತ್ ಜೋಡಿಯ ಆದಿ ಪುರುಷ್ ಚಿತ್ರ ಬಿಡುಗಡೆಯಾದ ಬಳಿಕ ಸಾಕಷ್ಟು ವಿವಾದಕ್ಕೆ ತುತ್ತಾಗಿದ್ದು, ಚಿತ್ರದ ಮೇಕಿಂಗ್, VFX ಮತ್ತು ಪಾತ್ರಗಳ ವಿಚಾರವಾಗಿ ಟ್ರೋಲ್ಗೆ ಒಳಗಾಗುತ್ತಿದೆ. ಇದೀಗ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು ಆಲ್ ಇಂಡಿಯಾ ಸಿನಿ ವರ್ಕರ್ಸ್ ಅಸೋಸಿಯೇಷನ್ ಚಿತ್ರವನ್ನು ಕೂಡಲೇ ನಿಷೇಧಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿದೆ.
“ಆದಿಪುರುಷ್ ಚಿತ್ರ ಸನಾತನ ಧರ್ಮ ಮತ್ತು ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದು, ಚಿತ್ರದಲ್ಲಿ ಶ್ರೀರಾಮನ ಚಾರಿತ್ರ್ಯ ಹರಣ ಮಾಡಲಾಗಿದೆ. ರಾಮ ಮಾತ್ರವಲ್ಲದೇ ರಾವಣನ ಪಾತ್ರವನ್ನೂ ವಿಡಿಯೋ ಗೇಮ್ ಗಳಂತೆ ಚಿತ್ರೀಕರಿಸಲಾಗಿದೆ. ಚಿತ್ರದಲ್ಲಿನ ಸಂಭಾಷಣೆ ಭಾರತ ಮಾತ್ರವಲ್ಲದೇ ಇಡೀ ಜಗತ್ತಿನ ಹಿಂದೂಗಳ ಭಾವನೆಗೆ ಧಕ್ಕೆ ತರುವಂತಿದೆ” ಎಂದು ಪತ್ರದಲ್ಲಿ ಆರೋಪಿಸಿದೆ.
All India Cine Workers Association write to Prime Minister Narendra Modi, requesting him to "stop screening the movie and immediately order a ban of #Adipurush screening in the theatres and OTT platforms in the future.
"We need FIR against Director Om Raut, dialogue writer… pic.twitter.com/jYq3yfv05c
— ANI (@ANI) June 20, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.