ಬೆಂಗಳೂರು: ಕರ್ನಾಟಕ ಸರ್ಕಾರದ ಆಯುಷ್ ಇಲಾಖೆ ಹಾಗೂ ಆರೋಗ್ಯ ಕುಟುಂಬ ಇಲಾಖೆ ವತಿಯಿಂದ ಇಂದು ವಿಧಾನಸೌಧದ ಮುಂಭಾಗದಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನ ಆಚರಣೆ ನಡೆದಿದೆ. ಕಾರ್ಯಕ್ರಮವನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ದಾರೆ.
ಕಾರ್ಯಕ್ರಮದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯುಟಿ ಖಾದರ್, ಸಭಾಪತಿ ಬಸವರಾಜ ಹೊರಟ್ಟಿ, ಸಚಿವ ದಿನೇಶ್ ಗುಂಡೂರಾವ್, ಶಾಸಕ ರಿಜ್ವಾನ್ ಅರ್ಷದ್ ಭಾಗಿಯಾಗಿದ್ದಾರೆ. ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ಚಿತ್ರ ನಟಿ ಭಾವನ್ ರಾಮಣ್ಣ, ಅದಿತಿ ಪ್ರಭುದೇವಾ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕೂಡ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ಬಿ.ಕೆ ವೆಂಕಟೇಶ್ ಪ್ರಸಾದ್, ಅಂತಾರಾಷ್ಟ್ರೀಯ ಅಥ್ಲೆಟಿಕ್ ಕ್ರೀಡಾಪಟು ಅಂಜು ಬಾಬಿ ಜಾರ್ಜ್, ನಟಿ ಭಾವನ ರಾಮಣ್ಣ, ಅದಿತಿ ಪ್ರಭುದೇವ ಸೇರಿದಂತೆ ಗಣ್ಯರು ಉಪಸ್ಥಿತರಿರಲಿದ್ದಾರೆ. ʼಯೋಗ- ವಸುಧೈವ ಕುಟುಂಬಕ್ಕಾಗಿʼ ಧ್ಯೇಯದೊಂದಿಗೆ ಯೋಗ ಆಯೋಜಿಸಲಾಗಿದೆ. ಬೆಳ್ಳಗ್ಗೆ 7 ಗಂಟೆಗೆ ಕಾರ್ಯಕ್ರಮ ಆರಂಭವಾಗಿದ್ದು, 10 ಗಂಟೆಯವರೆಗೂ ನಡೆದಿದೆ. ಯೋಗ ಡೇ ಟೀ ಶರ್ಟ್ ಧರಿಸಿ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ದಿನೇಶ್ ಗುಂಡುರಾವ್, “ಆಧುನಿಕ ಜೀವನ ಶೈಲಿಯ ಒತ್ತಡಗಳ ಪರಿಹಾರಕ್ಕೆ ಯೋಗ ಸಹಕಾರಿಯಾಗಿದ್ದು, ಯೋಗ ಪ್ರಪಂಚಕ್ಕೆ ಭಾರತ ಕೊಟ್ಟ ಕೊಡುಗೆಯಾಗಿದೆ. ವಿಶ್ವದಾದ್ಯಂತ ಯೋಗಕ್ಕೆ ಮನ್ನಣೆ ಸಿಗುತ್ತಿದೆ. ಇದರ ಅಭ್ಯಾಸದಿಂದ ದೈಹಿಕ ಮಾನಸಿಕ ಆರೋಗ್ಯ ಸುಧಾರಣೆಯೊಂದಿಗೆ ಉತ್ಸಾಹ ಮೂಡಲಿದೆ.ಇಂದಿನ ಜೀವನ ಶೈಲಿಯಿಂದ ಮಧುಮೇಹ, ಬಿಪಿ, ಕ್ಯಾನ್ಸರ್, ಹೃದಯ ಸಂಬಂಧಿ ಸಮಸ್ಯೆಗಳು ಹೆಚ್ಚಾಗಿವೆ. ಯೋಗವನ್ನು ರೂಢಿಸಿಕೊಳ್ಳುವುದರಿಂದ ಆರೋಗ್ಯವನ್ನು ಕಾಪಾಡಿಕೊಳ್ಳಲು ಸಾಧ್ಯವಿದೆ. ನಮ್ಮ ಸರ್ಕಾರದಿಂದ ಯೋಗಕ್ಕೆ ಪ್ರೋತ್ಸಾಹ ದೊರೆಯಲಿದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.