ಶ್ರೀನಗರ: ಇಂದು ಬೆಳಗ್ಗೆ ಕುಪ್ವಾರದ ಮಚ್ಚಲ್ ಸೆಕ್ಟರ್ನ ಕಾಲಾ ಜಂಗಲ್ನಲ್ಲಿ ಭಾರತೀಯ ಸೇನೆ ಮತ್ತು ಕಾಶ್ಮೀರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಿದ್ದಾರೆ. ಭಯೋತ್ಪಾದಕರು ಪಾಕ್ ಆಕ್ರಮಿತ ಜಮ್ಮು ಮತ್ತು ಕಾಶ್ಮೀರದಿಂದ ಭಾರತದ ಕಡೆ ನುಸುಳಲು ಯತ್ನಿಸುತ್ತಿದ್ದರು ಎಂದು ವರದಿಗಳು ತಿಳಿಸಿವೆ.
ಇದಕ್ಕೂ ಮುನ್ನ ಜೂನ್ 16 ರಂದು ಬೆಳಿಗ್ಗೆ ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಐವರು ವಿದೇಶಿ ಭಯೋತ್ಪಾದಕರು ಹತರಾಗಿದ್ದರು.
ಪ್ರಸ್ತುತ ಕುಪ್ವಾರದ ಪ್ರದೇಶದಲ್ಲಿ ಭಾರೀ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಕಾಶ್ಮೀರದ ಎಡಿಜಿಪಿ ವಿಜಯ್ ಕುಮಾರ್ ಖಚಿತಪಡಿಸಿದ್ದಾರೆ. ಕುಪ್ವಾರದ ಜುಮಗಂಡ್ ಪ್ರದೇಶದಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿಗಳ ನಡುವೆ ಎನ್ಕೌಂಟರ್ ನಡೆಯುತ್ತಿದೆ ಎಂದು ಪೊಲೀಸರು ದೃಢಪಡಿಸಿದ್ದಾರೆ. ವರದಿಗಳ ಪ್ರಕಾರ, ಈ ಘಟನೆಯು ಕಾಶ್ಮೀರದ ಕುಪ್ವಾರಾ ವಲಯದಿಂದ ಈ ವರ್ಷ ಒಳನುಸುಳುವಿಕೆಯ ಮೊದಲ ಪ್ರಮುಖ ಪ್ರಯತ್ನವಾಗಿದೆ.
In a joint operation, Army and Police have killed four #terrorists in Kala Jungle of Machhal sector in #Kupwara who were trying to infiltrate to our side from POJK.@JmuKmrPolice
— Kashmir Zone Police (@KashmirPolice) June 23, 2023
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.